ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 18 ಜುಲೈ 2020
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಭದ್ರಾವತಿಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳ ಆಗುತ್ತಿದೆ. ಶುಕ್ರವಾರ ಬಿಡುಗಡೆಯಾಗಿರುವ ವರದಿಯಲ್ಲಿ ನಾಲ್ವರಿಗೆ ಸೋಂಕು ತಗುಲಿರುವುದು ದೃಢವಾಗಿದೆ. ಈ ಪೈಕಿ ಇಬ್ಬರಿಗೆ ಟ್ರಾವಲ್ ಹಿಸ್ಟರಿ ಇಲ್ಲ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಯಾರಿಗೆಲ್ಲ ಸೋಂಕು ತಗುಲಿದೆ?
ಕೆಎಸ್ಆರ್ಟಿಸಿ ಬಸ್ ಡಿಪೋದ ಹಿಂಭಾಗದಲ್ಲಿ 49 ವರ್ಷದ ವ್ಯಕ್ತಿಯೊಬ್ಬರಲ್ಲಿ ಸೋಂಕು ತಗುಲಿದೆ. ಇವರು ಇತ್ತೀಚೆಗಷ್ಟೇ ಉಡುಪಿ ಜಿಲ್ಲೆಗೆ ಹೋಗಿ ಬಂದಿದ್ದರು ಎಂದು ಹೇಳಲಾಗುತ್ತಿದೆ.
ಇನ್ನು, ಸೀಗೆಬಾಗಿಯ ಯುವಕನೊಬ್ಬನಿಗೆ ಕರೋನ ಪಾಸಿಟಿವ್ ಬಂದಿದೆ. ಈತ ಮಾಚೇನಹಳ್ಳಿ ಬಳಿ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ಮತ್ತೊಂದೆಡೆ, ಅಣ್ಣಾನಗರದ ವ್ಯಕ್ತಿಯೊಬ್ಬರು ಮತ್ತು ದೇವನರಸೀಪುರದ 38 ವರ್ಷದ ವ್ಯಕ್ತಿಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇವರಿಬ್ಬರಿಗೆ ಯಾವುದೇ ಟ್ರಾವಲ್ ಹಿಸ್ಟರಿಯಿಲ್ಲ. ಆದರೂ ಸೋಂಕು ತಗುಲಿರುವುದು ಆತಂಕ ಮೂಡಿಸಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]