ಶಿವಮೊಗ್ಗ ಲೈವ್.ಕಾಂ | SHIMOGA | 3 ಫೆಬ್ರವರಿ 2020

ಯುವಕರಿಬ್ಬರ ನಡುವೆ ಮಾತಿಗೆ ಮಾತು ಬೆಳೆದು, ಒಬ್ಬನಿಗೆ ಚಾಕು ಇರಿಯಲಾಗಿದೆ. ಶಿವಮೊಗ್ಗದ ಎನ್.ಟಿ.ರಸ್ತೆಯಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದೆ.
ಇಲಿಯಾಸ್ ನಗರದ ಮಹಮದ್ ಅವೇಜ್ (18) ಚಾಕು ಇರಿತಕ್ಕೆ ಒಳಗಾದವನು. ಈತನನ್ನು ಕೂಡಲೇ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಪ್ರಾಥಮಿಕ ಚಿಕಿತ್ಸೆ ಬಳಿಕ ಖಾಸಗಿ ಆಸ್ಪತ್ರೆಗೆ ಅಡ್ಮಿಟ್ ಮಾಡಲಾಗಿದೆ.
ಮಹಮದ್ ಅವೇಜ್, ಅಂಜುಮನ್ ಎಂಬಾತನೊಂದಿಗೆ ಅಂಗಡಿಯೊಂದರ ಮುಂದೆ ಮಾತನಾಡುತ್ತಿ ನಿಂತಿದ್ದ. ಈ ವೇಳೆ ಇಬ್ಬರ ನಡುವೆ ಯಾವುದೋ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಈ ವೇಳೆ ಅಂಜುಮನ್, ಮಹಮದ್ ಅವೇಜ್’ಗೆ ಚಾಕು ಇರಿದಿದ್ದಾನೆ ಎಂದು ಆರೋಪಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
A youth was stabbed by his friend in Shimoga NT Road on Sunday. A verbal spat between the two led to the stabbing.