SHIVAMOGGA LIVE NEWS
ಸಾಗರ | ಕೂಲಿ ಕಾರ್ಮಿಕರೊಬ್ಬರ ಮನೆಗೆ ನುಗ್ಗಿರುವ ಕಳ್ಳರು ಚಿನ್ನಾಭರಣವನ್ನು ಕಳ್ಳತನ (THEFT) ಮಾಡಿದ್ದಾರೆ.
ತಾಲೂಕಿನ ಬೊಮ್ಮತ್ತಿಯಲ್ಲಿನ ಕೂಲಿ ಕಾರ್ಮಿಕರ ಮನೆಯಲ್ಲಿ 70 ಸಾವಿರ ರೂ. ಮೌಲ್ಯದ ಬಂಗಾರ ಮತ್ತು ಬೆಳ್ಳಿಯ ಆಭರಣಗಳ ಕಳವು ಮಾಡಲಾಗಿದ್ದು, ಈ ಸಂಬಂಧ ಸಾಗರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೊಮ್ಮತ್ತಿಯ ರಾಮಪ್ಪ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಬೀರುವಿನಲ್ಲಿ ಇಡಲಾಗಿದ್ದ 12 ಗ್ರಾಂ ತೂಕದ 4 ಜತೆ ಬಂಗಾರದ ಓಲೆ, 10 ಗ್ರಾಂ ತೂಕದ 2 ಜತೆ ಬೆಳ್ಳಿಯ ಗೆಜ್ಜೆಗಳನ್ನು ಕಳ್ಳತನ ಮಾಡಲಾಗಿದೆ.
ರಾಮಪ್ಪ, ಪತ್ನಿ ಮತ್ತು ಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರ ಈ ಮನೆಯಲ್ಲಿ ವಾಸವಾಗಿದ್ದು, ಎಲ್ಲರೂ ಪ್ರತಿದಿನದಂತೆ ಕೂಲಿ ಕೆಲಸಕ್ಕೆ ಹೋಗಿದ್ದರು. ಮನೆಗೆ ಬೀಗ ಹಾಕಿ, ವಾಲ್ಫೇಟ್ನಲ್ಲಿ ಕೀ ಇಡಲಾಗಿತ್ತು. ಜು. 28ರಂದು ಮುಂಬಾಗಲಿನ ಬೀಗ ತೆಗೆದು ಒಳ ಪ್ರವೇಶಿಸಿ ಕಳವು (THEFT) ಮಾಡಿದ್ದಾರೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.
ಇದನ್ನೂ ಓದಿ – ಸೇನೆಯ ಅಗ್ನಿಪಥ್ ನೇಮಕಾತಿಗೆ ಯೋಧರು, ಮಾಜಿ ಯೋಧರಿಂದ ಉಚಿತ ತರಬೇತಿ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.