ಸೀಮಂತಕ್ಕೆ ತೆರಳುತ್ತಿದ್ದ ವಾಹನ ಪಲ್ಟಿ
ಶಿಕಾರಿಪುರ : ಸೀಮಂತಕ್ಕೆ ತೆರಳುತ್ತಿದ್ದ ವಾಹನ ಪಲ್ಟಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 19 ಮಂದಿ ಗಾಯಗೊಂಡಿದ್ದಾರೆ. ಚಿನ್ನಿಕಟ್ಟೆ ಸಮೀಪ ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಾಯಾಳುಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿದೆ. ಹಿರೆಕೆರೂರು ತಾಲೂಕಿನ ಗ್ರಾಮವೊಂದರಲ್ಲಿ ನಡೆಯುತ್ತಿದ್ದ ಸೀಮಂತ ಕಾರ್ಯಕ್ಕೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.