ಶಿವಮೊಗ್ಗ ಜಿಲ್ಲಾಧಿಕಾರಿ ವರ್ಗಾವಣೆ
ಶಿವಮೊಗ್ಗ : ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರ ಜಾಗಕ್ಕೆ ಧಾರವಾಡದಲ್ಲಿ ಜಿಲ್ಲಾಧಿಕಾರಿಯಾಗಿದ್ದ ಗುರುದತ್ತ ಹೆಗಡೆ ಅವರನ್ನು ನಿಯೋಜಿಸಲಾಗಿದೆ. ಡಾ. ಸೆಲ್ವಮಣಿ ಅವರು, 2022ರ ಜ.13 ರಂದು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಅವರನ್ನು ಬೆಂಗಳೂರಿನ ಇ-ಆಡಳಿತ ಕೇಂದ್ರದ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಯಾಗಿ ನೇಮಿಸಲಾಗಿದೆ. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.