ಶಿವಮೊಗ್ಗ ಲೈವ್.ಕಾಂ | SHIMOGA | 18 ಜನವರಿ 2020

ಸರಕಾರಿ ನೌಕರರಿಗಾಗಿ ರಾಜೇಂದ್ರ ನಗರದ ಕಂದಾಯ ನೌಕರರ ಭವನದಲ್ಲಿ ಆರಂಭಿಸಲಾಗಿರುವ ಕ್ಯಾಂಟೀನ್ ಅನ್ನು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ, ಸರಕಾರಿ ನೌಕರರು ಹಾಗೂ ಅಧಿಕಾರಿಗಳಿಗೆ ರಿಯಾಯಿತಿ ದರದಲ್ಲಿ ದಿನ ಬಳಕೆ ಹಾಗೂ ಗೃಹೋಪಯೋಗಿ ವಸ್ತುಗಳನ್ನು ದೊರಕಿಸಿಕೊಡುವ ಪರಿಕಲ್ಪನೆ ಇಟ್ಟುಕೊಂಡು ಈ ಕ್ಯಾಂಟೀನ್ ಆರಂಭಿಸಲಾಗಿದೆ. ಈ ಕ್ಯಾಂಟೀನ್ ಮೂಲಕ ಆಹಾರ ಧಾನ್ಯ, ದೈನಂದಿನ ಮನೆ ಬಳಕೆ ವಸ್ತುಗಳನ್ನು ಸರಕಾರಿ ನೌಕರರು ರಿಯಾಯಿತಿ ದರದಲ್ಲಿ ಪಡೆಯಬಹುದು ಎಂದು ತಿಳಿಸಿದರು.
ಈ ಸೌಲಭ್ಯವನ್ನು ತಮಗೂ ನೀಡುವಂತೆ ನಿವೃತ್ತ ನೌಕರರು, ವಿದ್ಯಾಲಯದ ನೌಕರರು, ಸ್ಥಳೀಯ ಸಂಸ್ಥೆಗಳ ನೌಕರರು, ವೈದ್ಯರು ಹೇಳಿದ್ದಾರೆ. ಮುಂದಿನ ದಿನದಲ್ಲಿ ಅವರಿಗೂ ಸೌಲಭ್ಯ ದೊರಕಿಸಿಕೊಡುವ ಪ್ರಯತ್ನ ನಡೆಸಲಾಗುವುದು ಎಂದರು.
ಕ್ಯಾಂಟೀನ್ನಲ್ಲಿ ಪ್ರಖ್ಯಾತ ಕಂಪನಿಗಳ ರೆಫ್ರಿಜರೇಟರ್, ಟಿವಿ, ಮೊಬೈಲ್, ಮಿಕ್ಸರ್ ಗ್ರೈಂಡರ್ ಸೇರಿದಂತೆ ಎಲ್ಲ ರೀತಿಯ ಗೃಹೋಪಯೋಗಿ ವಸ್ತುಗಳು ಹಾಗೂ ದಿನನಿತ್ಯ ಬಳಕೆಯ ಪದಾರ್ಥಗಳು ದೊರಕಲಿದೆ. ನೌಕರರಿಗೆ ಸಾಲ ಸೌಲಭ್ಯ ಲಭ್ಯವಿದೆ. ದ್ವಿಚಕ್ರ ವಾಹನ ಹಾಗೂ ಕಾರುಗಳನ್ನು ಸಹ ಕೊಳ್ಳಬಹುದಾಗಿದೆ. ಕೊಂಡುಕೊಡಂತಹ ವಸ್ತುಗಳನ್ನು ಮನೆಬಾಗಿಲಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗುವುದು. ಅಲ್ಲದೆ, ಆನ್ ಲೈನ್ ಮೂಲಕ ತಮಗೆ ಬೇಕಾದ ವಸ್ತುಗಳನ್ನು ಬುಕಿಂಗ್ ಮಾಡುವ ಸೌಲಭ್ಯ ಕಲ್ಪಿಸಲಾಗಿದೆ ಎಂದರು.

ಕ್ಯಾಂಟೀನ್ನಲ್ಲಿ ಕಂಪನಿಗಳಿಂದ ಉತ್ಪನಗಳು ನೇರವಾಗಿ ಹಾಗೂ ಕಡಿಮೆ ದರದಲ್ಲಿ ದೊರಕಲಿದೆ. ದಿನ ಬಳಕೆ ಹಾಗೂ ಗೃಹೋಪಯೋಗಿ ವಸ್ತುಗಳು ಸೇರಿದಂತೆ ಸುಮಾರು 450ಕ್ಕೂ ಹೆಚ್ಚು ಉತ್ಪನ್ನ ಲಭ್ಯವಿದೆ. ಸರಕಾರಿ ನೌಕರರ ಸಂಘದಿಂದ ರಾಜ್ಯದಲ್ಲಿ ಮೊದಲ ಬಾರಿಗೆ ಶಿವಮೊಗ್ಗದಲ್ಲಿ ಕ್ಯಾಂಟಿನ್ ಪ್ರಾರಂಭ ಗೊಂಡಿದೆ. ಆರು ಸಾವಿರಕ್ಕೂ ಹೆಚ್ಚು ಮಂದಿ ಇದರ ಸದಸ್ಯತ್ವ ಪಡೆದಿದ್ದಾರೆ. ಮುಂದೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಇದನ್ನು ವಿಸ್ತರಿಸುವ ಉದ್ದೇಶ ಇದೆ ಎಂದು ಷಡಾಕ್ಷರಿ ತಿಳಿಸಿದರು.

ವಿಧಾನಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಜಿಲ್ಲಾಧಿಕಾರಿ ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಶಾಂತರಾಜ್ ಮತ್ತಿತರರು ಹಾಜರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
Government Employees union has set up a canteen for the employees. This the first canteen established in Karnataka.