ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ |SHIMOGA NEWS | 21 NOVEMBER 2020
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಇವತ್ತು ಬಸವನಗುಡಿ, ಅಮೀರ್ ಅಹಮ್ಮದ್ ಕಾಲೋನಿ ನಿವಾಸಿಗಳಿಗೆ ಮನೆ ಪರಿಚಯ ಪತ್ರ ವಿತರಿಸಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಬಳಿಕ ಮಾತನಾಡಿದ ಸಚಿವ ಈಶ್ವರಪ್ಪ, ನಗರದ 23 ಪ್ರದೇಶಗಳಲ್ಲಿ ಪರಿಚಯ ಪತ್ರ ವಿತರಿಸಿದ್ದೇವೆ. ಈ ಪರಿಚಯ ಪತ್ರ ಹೊಂದಿದವರಿಗೆ ಹಕ್ಕುಪತ್ರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪಾಲಿಕೆ ವತಿಯಿಂದ ಇಲ್ಲಿನ ನಿವಾಸಿಗಳಿಗೆ ಮೂಲ ಸೌಲಭ್ಯ ಸೇರಿದಂತೆ ಅಗತ್ಯ ಸೌಕರ್ಯ ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ಪರಿಚಯ ಪತ್ರ ಸಿಕ್ಕ ಕೂಡಲೇ ಬ್ಯಾಂಕ್ನಲ್ಲಿ ಲೋನ್ ಸಿಗುತ್ತದೆ ಎಂದು ನಿವಾಸಿಗಳು ಭಾವಿಸಿದ್ದಾರೆ. ಅವರಿಗೆ ಹಕ್ಕುಪತ್ರ ಕೊಡುವ ಮೂಲಕ ಋಣ ತೀರಿಸುವ ಕೆಲಸ ಮಾಡಬೇಕು ಎಂದು ಈಶ್ವರಪ್ಪ ಹೇಳಿದರು.
ಪಾಲಿಕೆ ಸದಸ್ಯ ರಮೇಶ್ ಹೆಗ್ಡೆ ಮಾತನಾಡಿ, ಕೊಳಚೆ ಪ್ರದೇಶ ಎಂದು ಘೋಷಣೆಯಾಗಿ 10 ವರ್ಷವಾಗಿದೆ. ಸಾಮಾಜಿಕ, ಆರ್ಥಿಕ ಸಮೀಕ್ಷೆ ನಡೆಸಿ ಪರಿಚಯ ಪತ್ರ ನೀಡಲಾಗಿದೆ. ಸಚಿವರ ಸಹಕಾರದಿಂದ ಹಕ್ಕುಪತ್ರ ಕೂಡ ಸಿಗಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮೇಯರ್ ಸುವರ್ಣ ಶಂಕರ್, ಉಪಮೇಯರ್ ಸುರೇಖಾ ಮುರಳೀಧರ್, ಸದಸ್ಯ ಇ.ವಿಶ್ವಾಸ್ ಸೇರಿದಂತೆ ಹಲವರು ಇದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]