ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಜುಲೈ 2020
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಕರೋನ ಸೋಂಕು ಹರಡುವುದನ್ನು ತಡೆಯಲು ಗಾಂಧಿ ಬಜಾರ್ನ ವರ್ತಕರು ಇನ್ಮುಂದೆ ಮಧ್ಯಾಹ್ನ ಮೂರು ಗಂಟೆಗೆ ಅಂಗಡಿಗಳನ್ನು ಬಂದ್ ಮಾಡಲು ನಿರ್ಧರಿಸಿದ್ದಾರೆ. ಅದೆ ರೀತಿ ಇತರೆಡೆಯು ವರ್ತಕರು ಸ್ವಯಂ ಪ್ರೇರಿತ ಬಂದ್ ಮಾಡಲು ನಿರ್ಧರಿಸಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಶಿವಮೊಗ್ಗ ನಗರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳ ಮತ್ತು ಕಂಟೈನ್ಮೆಂಟ್ ಜೋನ್ಗಳ ಸಂಖ್ಯೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕರೋನ ನಿಯಂತ್ರಣಕ್ಕಾಗಿ ನಗರದ ವಿವಿಧೆಡೆಯ ವರ್ತಕರು ಮಧ್ಯಾಹ್ನ ಮೂರು ಗಂಟೆಗೆ ವ್ಯಾಪಾರ, ವಹಿವಾಟು ಬಂದ್ ಮಾಡಲು ನಿರ್ಧರಿಸಿದ್ದಾರೆ.
ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ನಡೆದ ಸಭೆಯಲ್ಲಿ ವರ್ತಕರು ಸ್ವಯಂ ಪ್ರೇರಿತ ಬಂದ್ ಮಾಡುವುದಾಗಿ ಹಲವು ಸಂಘ ಸಂಸ್ಥೆಗಳು ತಿಳಿಸಿವೆ. ಅಗತ್ಯ ವಸ್ತುಗಳ ಮಾರಾಟಕ್ಕೆ ಅವಕಾಶವಿದೆ.
ಪಾಲಿಕೆ ಕಮಿಷನರ್ ಸ್ಪಷ್ಟನೆ
ಇನ್ನು, ಶಿವಮೊಗ್ಗ ಲೈವ್.ಕಾಂಗೆ ಸ್ಪಷ್ಟನೆ ನೀಡಿದ ಮಹಾನಗರ ಪಾಲಿಕೆ ಕಮಿಷನರ್ ಚಿದಾನಂದ ವಠಾರೆ, ಲಾಕ್ ಡೌನ್ ಸಂಬಂಧ ಪಾಲಿಕೆಯಿಂದ ಯಾವುದೇ ಅಧಿಕೃತ ಆದೇಶ ಹೊರಡಿಸಿಲ್ಲ. ಆದರೆ ವರ್ತಕರು ಸ್ವಯಂ ಪ್ರೇರಿತವಾಗಿ ಬಂದ್ ಮಾಡುವುದಾಗಿ ತಿಳಿಸಿದ್ದಾರೆ ಎಂದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]