ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 16 DECEMBER 2022
ಶಿವಮೊಗ್ಗ : ಕಾಂಗ್ರೆಸ್ ಪಕ್ಷದ ನಾಯಕಿ ಸೋನಿಯಾ ಗಾಂಧಿ (sonia gandhi) ಅವರ ಹುಟ್ಟುಹಬ್ಬದ ಅಂಗವಾಗಿ ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ತಿಳಿಸಿದರು.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಎಸ್.ಸುಂದರೇಶ್ ಅವರು, ಡಿ.18ರಂದು ಬೆಳಗ್ಗೆ 8 ಗಂಟೆಯಿಂದ 4 ಗಂಟೆವರೆಗೆ (sonia gandhi) ಸೈನ್ಸ್ ಮೈದಾನದಲ್ಲಿ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಆಯೋಜಿಸಲಾಗಿದೆ. ವೈದ್ಯಕೀಯ ಘಟಕದ ಅಧ್ಯಕ್ಷ ಡಾ. ಪ್ರದೀಪ್ ಡಿಮೆಲ್ಲೋ ಅವರು ಶಿಬಿರದ ನೇತೃತ್ವದ ವಹಿಸಿದ್ದಾರೆ. ನಗರದ ಪ್ರಮುಖ ಆಸ್ಪತ್ರೆಗಳ ವೈದ್ಯರು ಶಿಬಿರದಲ್ಲಿ ಆರೋಗ್ಯ ತಪಾಸಣೆ ನಡೆಸಲಿದ್ದಾರೆ ಎಂದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಹೃದಯ ಸಂಬಂಧಿತ ಕಾಯಿಲೆಗಳು, ಮೂಳೆ ತೊಂದರೆ, ಕಣ್ಣಿನ ತಪಾಸಣೆ, ನರರೋಗ, ಸ್ತ್ರೀ ರೋಗ, ಚರ್ಮ ರೋಗ, ಮಧುಮೇಹ, ಮೂಗು, ಗಂಟಲು, ದಂತ ವೈದ್ಯಕೀಯ ಮುಂತಾದ ಕಾಯಿಲೆಗಳ ತಪಾಸಣೆ ಮತ್ತು ಚಿಕಿತ್ಸೆ ನೀಡಲಾಗುತ್ತದೆ ಎಂದರು.
ಇದನ್ನೂ ಓದಿ – ಶಿವಮೊಗ್ಗದ ಕಥೆ ಈಗ ಅಮೆಜಾನ್ ಪ್ರೈಮ್ನಲ್ಲಿ ವೆಬ್ ಸೀರಿಸ್, ಡಿ.16ಕ್ಕೆ 8 ಎಪಿಸೋಡ್ ರಿಲೀಸ್
ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್, ಸದಸ್ಯರಾದ ಯಮುನಾ ರಂಗೇಗೌಡ, ಮೆಹಕ್ ಶರೀಫ್, ಪ್ರಮುಖರಾದ ಟಿ.ಕೃಷ್ಣಪ್ಪ, ಡಾ. ಪ್ರದೀಪ್ ಡಿಮೆಲ್ಲೋ, ಚಂದನ್, ಚಂದ್ರಶೇಖರ್, ತಿಮ್ಮರಾಜು, ಕಲೀಂ ಪಾಷಾ ಸೇರಿದಂತೆ ಹಲವರು ಇದ್ದರು.