ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE | 27 JULY 2023
THIRTHAHALLI : ಭಾರಿ ಮಳೆ, ಭಾರಿ ವಾಹನಗಳ ಓಡಾಟದಿಂದ ಆಗುಂಬೆ ಘಾಟಿಯ (Agumbe Ghat) ಮೂರು ತಿರುವುಗಳಲ್ಲಿ ಸಣ್ಣ ಬಿರುಕು, ರಸ್ತೆ ಕುಸಿತ ಉಂಟಾಗಿದೆ. ಈ ಹಿನ್ನೆಲೆ ತಾತ್ಕಾಲಿಕವಾಗಿ ಭಾರಿ ವಾಹನ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ – ಮಲ್ಪೆ ರಸ್ತೆಯ ಆಗುಂಬೆ (Agumbe Ghat) ಘಾಟಿಯಲ್ಲಿ 6, 7 ಮತ್ತು 11ನೇ ತಿರುವಿನಲ್ಲಿ ಭಾರೀ ಮಳೆ ಮತ್ತು ಭಾರೀ ವಾಹನಗಳ ಓಡಾಟದಿಂದ ಸಣ್ಣ ಬಿರುಕು ಹಾಗೂ ಅಲ್ಲಲ್ಲಿ ರಸ್ತೆ ಕುಸಿತ ಕಂಡು ಬಂದಿದೆ. ಅಲ್ಲಲ್ಲಿ ತಡೆಗೋಡೆ ಕುಸಿದಿದ್ದು ಅಪಘಾತದ ಸಂಭವವಿದೆ. ಆದ್ದರಿಂದ ತಾತ್ಕಾಲಿಕವಾಗಿ ಭಾರೀ ವಾಹನ ಸಂಚಾರ ನಿಷೇಧಿಸಿ ಬದಲಿ ಮಾರ್ಗಗಳಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆದೇಶಿಸಿದ್ದಾರೆ.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಇದನ್ನೂ ಓದಿ – ಪೊಲೀಸರು ಹಾಫ್ ಹೆಲ್ಮೆಟ್ ಧರಿಸಿದೆರೆ ಕ್ರಮವೇನು? ಠಾಣೆಗಳಿಗೆ ವಾರ್ನಿಂಗ್ ಸಂದೇಶ ರವಾನಿಸಿದ ರಕ್ಷಣಾಧಿಕಾರಿ
ಜು.27 ರಿಂದ ಸೆ.15ರವರೆಗೆ ಈ ರಸ್ತೆಯಲ್ಲಿ ಭಾರೀ ವಾಹನ ಸಂಚಾರ ನಿಷೇಧಿಸಲಾಗಿದೆ. ಈ ಮಾರ್ಗದಲ್ಲಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅನುವು ಮಾಡಲಾಗಿದೆ. ಭಾರೀ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಆದೇಶಿಸಲಾಗಿದೆ.
ಎರಡು ಪರ್ಯಾಯ ಮಾರ್ಗ
ತೀರ್ಥಹಳ್ಳಿ-ಉಡುಪಿ ಮಾರ್ಗದಲ್ಲಿ ಚಲಿಸುವ ಭಾರೀ ವಾಹನಗಳು ತೀರ್ಥಹಳ್ಳಿ-ಆಗುಂಬೆ-ಶೃಂಗೇರಿ-ಮಾಳಾ
ಶಿವಮೊಗ್ಗ ಲೈವ್.ಕಾಂ