ಶಿವಮೊಗ್ಗ ಲೈವ್.ಕಾಂ | 27 ಫೆಬ್ರವರಿ 2019
ಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಹೆಸರನ್ನು ಘೋಷಿಸಲಾಗಿದೆ. ಇದರ ಬೆನ್ನಿಗೆ ಕಾಂಗ್ರೆಸ್’ನಿಂದ ಸ್ಪರ್ಧಿಸಲು ಆಕಾಂಕ್ಷಿಗಳು ಮುಂದೆ ಬಂದಿದ್ದಾರೆ. ಸುದ್ದಿಗೋಷ್ಠಿ ನಡೆಸಿದ ಮಾಜಿ ಶಾಸಕ ಹೆಚ್.ಎಂ.ಚಂದ್ರಶೇಖರಪ್ಪ, ಪಕ್ಷ ಅವಕಾಶ ಮಾಡಿಕೊಟ್ಟರೆ, ಸ್ಪರ್ಧಿಸಲು ಸಿದ್ಧ ಎಂದು ತಿಳಿಸಿದ್ದಾರೆ.
ಮಧು ಬಂಗಾರಪ್ಪ ಮಾತ್ರ ಜೆಡಿಎಸ್-ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಲ್ಲ. ಕಾಂಗ್ರೆಸ್ ಪಕ್ಷದ ವಿಷಯಕ್ಕೆ ಬಂದರೆ ತಾವು ಕೂಡ ಮಾಜಿ ಶಾಸಕ. ಕಾಂಗ್ರೆಸ್ ಪಕ್ಷಕ್ಕೆ ಸಾಕಷ್ಟು ದುಡಿದಿದ್ದೇನೆ. ಕಳೆದ ವಿಧಾನಸಭೆಯಲ್ಲೂ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಆದರೆ ಅವಕಾಶ ವಂಚಿತನಾದೆ. ಈಗ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಲ್ಲಿ ಒಬ್ಬನಾಗಿದ್ದೇ. ತಮಗೆ ಟಿಕೆಟ್ ನೀಡಬೇಕು ಎಂದು ಹೆಚ್.ಎಂ.ಚಂದ್ರಶೇಖರಪ್ಪ, ಹೈಕಮಾಂಡ್’ಗೆ ಮನವಿ ಮಾಡಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]
