SHIVAMOGGA LIVE NEWS | HOLIDAY| 19 ಮೇ 2022
ಶಿವಮೊಗ್ಗ ಜಿಲ್ಲೆಯಾದ್ಯಂತ ನಿರಂತರ ಮಳೆ ಹಿನ್ನೆಲೆ ಶಾಲೆಗಳಿಗೆ ನೀಡಲಾಗಿದ್ದ ರಜೆಯನ್ನು ಇನ್ನೊಂದು ದಿನಕ್ಕೆ ವಿಸ್ತರಣೆ ಮಾಡಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ.
ಭಾರಿ ಮಳೆ ಹಿನ್ನೆಲೆ ಮೇ 19ರಂದು ಜಿಲ್ಲೆಯಾದ್ಯಂತ ರಜೆ ಘೋಷಣೆ ಮಾಡಲಾಗಿತ್ತು. ನಾಳೆಯು (ಮೇ 20) ಮಳೆ ಮುಂದುವರೆಯುವ ಸಾದ್ಯತೆ ಇರುವುದರಿಂದ ಮತ್ತೊಂದು ದಿನಕ್ಕೆ ರಜೆ ವಿಸ್ತರಣೆ ಮಾಡಲಾಗಿದೆ.
ಜಿಲ್ಲೆಯ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿಗಳಿಗು ರಜೆ ಅನ್ವಯವಾಗಲಿದೆ.
ಇದನ್ನೂ ಓದಿ – ಶಿವಮೊಗ್ಗ ನಗರದಲ್ಲಿ ಮಳೆ ಅವಾಂತರ, ಎಲ್ಲೆಲ್ಲಿ ಏನೇನಾಗಿದೆ? ಭಾಗ – 1
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.