ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 03 ಡಿಸೆಂಬರ್ 2019
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ದಿಢೀರ್ ಬೆಳವಣಿಗೆಯಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಸಂಬಂಧ ಸರ್ಕಾರ ಹೊರಡಿಸಿದ್ದ ಆದೇಶವನ್ನು ನಾಲ್ಕು ದಿನದಲ್ಲಿ ಹಿಂಪಡೆದಿದೆ. ಆಡಳಿತಾಧಿಕಾರಿ ನೇಮಕ ಮಾಡಿದ್ದ ಆದೇಶ ಹಿಂಪಡೆಯಲಾಗಿದೆ.
ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ವಿಜಯ ಕುಮಾರ್ ಅವರು ಈ ಸಂಬಂಧ ಅಧಿಸೂಚನೆ ಹೊರಡಿಸಿದ್ದಾರೆ. 2019ರ ನವೆಂಬರ್ 28ರಿಂದ ಜಾರಿಗೆ ಬರುವಂತೆ ಆಡಳಿತಾಧಿಕಾರಿ ನೇಮಕ ಮಾಡುವಂತೆ ಹೊರಡಿಸಲಾಗಿದ್ದ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.
ಆಡಳಿತಾಧಿಕಾರಿಯನ್ನು ನೇಮಕ ಮಾಡಿದ್ದೇಕೆ?
ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಮತ್ತು ಉಪ ಮೇಯರ್ ಅಧಿಕಾರ ಅವಧಿ ಮುಗಿದ ಹಿನ್ನೆಲೆಯಲ್ಲಿ ನ.28ರಂದು ಆಡಳಿತಾಧಿಕಾರಿ ನೇಮಿಸಲಾಗಿತ್ತು. ಜಿಲ್ಲಾಧಿಕಾರಿ ಶಿವಕುಮಾರ್ ಅವರು ಆಡಳಿತಾಧಿಕಾರಿಯನ್ನಾಗಿ ಸರ್ಕಾರ ನೇಮಿಸಿತ್ತು. ಕರ್ನಾಟಕ ಮುನಿಸಿಪಲ್ ಕಾರ್ಪೊರೇಷನ್ ಕಾಯ್ದೆ 1976ರ ನಿಯಮ 100ರ ಅನ್ವಯ ಆಡಳಿತಾಧಿಕಾರಿ ನೇಮಕ ಮಾಡಲಾಗಿದೆ ಎಂದು ತಿಳಿಸಲಾಗಿತ್ತು.
ನಾಲ್ಕು ದಿನದಲ್ಲಿ ಆದೇಶ ಹಿಂದಕ್ಕೆ
ನಾಲ್ಕು ದಿನದಲ್ಲಿ ಸರ್ಕಾರದ ತನ್ನ ಆದೇಶ ಹಿಂಪಡೆದಿದೆ. ಮುಂದಿನ ಮೇಯರ್ ಮತ್ತು ಉಪ ಮೇಯರ್ ಆಯ್ಕೆ ಆಗುವವರೆಗೆ ಲತಾ ಗಣೇಶ್ ಮತ್ತು ಎಸ್.ಎನ್.ಚನ್ನಬಸಪ್ಪ ಅವರು ಮೇಯರ್ ಮತ್ತು ಉಪ ಮೇಯರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
Karnataka State Government has withdrawn the order of appointing the administrator to Shimoga Mahanagara Palike.