ಶಿವಮೊಗ್ಗ ಲೈವ್.ಕಾಂ | 20 ಮೇ 2019
ಶಿವಮೊಗ್ಗ ನಗರದಲ್ಲಿ ಅಟೋ ಮೀಟರ್ ಹಾಕದೆ ಪ್ರಯಾಣಿಕರಿಂದ ಹೆಚ್ಚಿನ ಹಣ ಪಡೆಯುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಎಲ್ಲಾ ಅಟೋ ಚಾಲಕರು ಕಡ್ಡಾಯವಾಗಿ ಅಟೋ ಮೀಟರ್ ಹಾಕಬೇಕು ಅಂತಾ ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಇವತ್ತು, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದರು.
ಪ್ರಯಾಣಿಕರು ಹೇಳಿದರೆ ಮಾತ್ರ ಅಟೋ ಚಾಲಕರು ಮೀಟರ್ ಹಾಕುವಂತಹ ಪರಿಪಾಠವಿದೆ. ಕಡ್ಡಾಯವಾಗಿ ಪ್ರತಿ ಬಾರಿ ಮೀಟರ್ ಹಾಕಬೇಕು. ಎಲ್ಲಾ ಅಟೋಗಳಲ್ಲಿ ಚಾಲಕನ ಹೆಸರು, ವಿಳಾಸ, ಛಾಯಾಚಿತ್ರ, ಅಟೋ ವಿವರ ಸೇರಿದಂತೆ ಇನ್ನಿತರ ಮಾಹಿತಿ ಫಲಕ ಅಳವಡಿಸಬೇಕು. ನಗರದಲ್ಲಿ ಅಟೋಗಳ ಸಂಖ್ಯೆಯನ್ನು ನಿಯಂತ್ರಿಸುವ ಉದ್ದೇಶದಿಂದ ಇನ್ನು ಮುಂದೆ ಅಟೋ ಖರೀದಿ ಮಾಡುವ ಪೂರ್ವದಲ್ಲಿ ನೋಂದಣಿಗೆ ಅನುಮತಿ ನೀಡುವ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯುವ ಬಗ್ಗೆ ಪರಿಶೀಲಿಸಲು ಅವರು ಸೂಚನೆ ನೀಡಿದರು.
ಎಲೆಕ್ಟ್ರಿಕಲ್ ಅಟೋಗೆ ಅನುಮತಿ
ಶಿವಮೊಗ್ಗ ನಗರದಲ್ಲಿ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಪೂರಕವಾಗಿ, ಎಲೆಕ್ಟ್ರಿಕಲ್ ಅಟೋಗೆ ಅನುಮತಿಯನ್ನು ಪ್ರಾಯೋಗಿಕವಾಗಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಪ್ರೀ ಪೇಯ್ಡ್ ಕೌಂಟರ್
ರೈಲ್ವೇ ನಿಲ್ದಾಣದಲ್ಲಿ ಮುಂಗಡ ಪಾವತಿ ಅಟೋ ಕೌಂಟರ್ ಆರಂಭಿಸಲು ಅನುಮತಿಯನ್ನು ನೀಡಲಾಗಿದೆ. ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಮಿನಿ ಬಸ್ ಸೇವೆಯನ್ನು ಆರಂಭಿಸಲು ಅನುಮತಿ ನೀಡಲಾಗುವುದು ಎಂದು ಅವರು ಹೇಳಿದರು.

ಹಿರಿಯ ನಾಗರಿಕರ ಗುರುತಿನ ಚೀಟಿಯನ್ನು ತೋರಿಸಿದರೂ ಕೆಲವು ಖಾಸಗಿ ಬಸ್‍ಗಳಲ್ಲಿ ರಿಯಾಯಿತಿ ನೀಡಲು ನಿರಾಕರಿಸಿರುವ ಬಗ್ಗೆ ದೂರುಗಳನ್ನು ಸ್ವೀಕರಿಸಲಾಗಿದ್ದು, ಅಂತಹ ಸಂಸ್ಥೆಗಳಿಗೆ ನೊಟೀಸ್ ಜಾರಿಗೊಳಿಸಬೇಕು. ಎಲ್ಲಾ ಬಸ್ ನಿಲ್ದಾಣಗಳಲ್ಲಿ ಅಂಗವಿಕಲ ಪ್ರಯಾಣಿಕರಿಗಾಗಿ ರಾಂಪ್ ಹಾಗೂ ಗಾಲಿಕುರ್ಚಿ ವ್ಯವಸ್ಥೆಯನ್ನು ಕಲ್ಪಿಸಬೇಕು ಜಿಲ್ಲಾಧಿಕಾರಿ ಅವರು ತಿಳಿಸಿದರು.
ರೋಡ್ ಹಂಪ್’ಗಳಿಗೆ ಬಣ್ಣ
ರಿಪ್ಪನ್‍ಪೇಟೆ ರೈಲ್ವೇ ಗೇಟ್ ಬಳಿ ಇರುವ ರಸ್ತೆ ಉಬ್ಬಿಗೆ ಬಣ್ಣ ಬಳಿಯದ ಕಾರಣ ಹಲವಾರು ಅಪಘಾತಗಳು ಸಂಭವಿಸುತ್ತಿರುವೆ. ಹಾಗಾಗಿ ಸ್ಥಳೀಯ ಬಾಲಕನೋರ್ವ ಸ್ವಯಂಪ್ರೇರಣೆಯಿಂದ ಹಂಪ್’ಗೆ ಬಣ್ಣ ಬಳಿದಿರುವ ವರದಿ ಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಆದ್ದರಿಂದ, ರೋಡ್ ಹಂಪ್’ಗೆ, ಖಾಯಂ ಬಣ್ಣ ಬಳಿದು, ಸೂಚನಾ ಫಲಕ ಅಳವಡಿಸಬೇಕು. ಈ ರೀತಿಯ ಅಪಾಯಕಾರಿ ರೋಡ್ ಹಂಪ್’ಗಳಿಗೆ ಎಚ್ಚರಿಕೆ ಬಣ್ಣವನ್ನು ಕಡ್ಡಾಯವಾಗಿ ಹಾಕುವಂತೆ ಅವರು ಆ ಬಳಿಕ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಸೂಚನೆ ನೀಡಿದರು.
ಜಿಲ್ಲಾ ರಕ್ಷಣಾಧಿಕಾರಿ ಡಾ.ಅಶ್ವಿನಿ, ಪ್ರಾದೇಶಿಕ ಸಾರಿಗೆ ಜಂಟಿ ಆಯುಕ್ತ ಶಿವರಾಜ ಪಾಟೀಲ್, ವಿವಿಧ ಸಾರಿಗೆ ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]