ಶಿವಮೊಗ್ಗ ಲೈವ್.ಕಾಂ | 26 ಡಿಸೆಂಬರ್ 2018
ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ, ಬೇಸರಗೊಂಡಿದ್ದ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ, ತಾಳ್ಮೆಯ ಹಾದಿ ತುಳಿಯಲು ನಿರ್ಧರಿಸಿದ್ದಾರೆ. ಯಾವುದೇ ಕಾರಣಕ್ಕೂ ನಿಗಮ, ಮಂಡಳಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವುದಿಲ್ಲ ಅಂತಾ ಖಡಕ್ ಆಗಿ ಹೇಳಿದ್ದ ಅವರೀಗ, ಭೂ ಸೇನಾ ನಿಗಮದ ಅಧ್ಯಕ್ಷರಾಗಲು ಗ್ರೀನ್ ಸಿಗ್ನಲ್ ನೀಡಿದ್ದಾರೆ.
![]() |

ಕುತೂಹಲ ಮೂಡಿಸಿತ್ತು ಬೆಂಬಲಿಗರ ಸಭೆ
ಮಿನಿಸ್ಟರ್ ಪಟ್ಟ ಸಿಗದೆ ಬೇಸರಗೊಂಡಿದ್ದ ಸಂಗಮೇಶ್ವರ್, ಬೆಂಬಲಿಗರ ಸಭೆ ನಡೆಸಿ, ಮುಂದಿನ ನಡೆಯ ಕುರಿತು ಪ್ರಕಟಿಸುವುದಾಗಿ ಹೇಳಿದ್ದರು. ಈಗ ಬೆಂಬಲಿಗರ ಸಭೆಯಲ್ಲಿ, ತಮ್ಮ ನಿಲುವು ಪ್ರಕಟಿಸಿದ್ದು, ಭೂ ಸೇನಾ ನಿಗಮದ ಅಧ್ಯಕ್ಷ ಸ್ಥಾನ ವಹಿಸಕೊಳ್ಳುವುದಾಗಿ ಹೇಳಿದ್ದಾರೆ.

ಸಂಗಮೇಶ್ವರ್ ದಿಢೀರ್ ಯು ಟರ್ನ್’ಗೆ ಕಾರಣವೇನು?

ಶಾಸಕ ಸಂಗಮೇಶ್ವರ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಜಿಲ್ಲಾ ಕಾಂಗ್ರೆಸ್, ಕಾರ್ಯಕರ್ತರು ಒತ್ತಾಯಿಸಿದ್ದರು. ಈ ಬಾರಿ ಸಂಪುಟ ವಿಸ್ತರಣೆ ಬಗ್ಗೆ ಸಂಗಮೇಶ್ವರ್ ಅವರು ಬಹಳ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ನಿಗಮ, ಮಂಡಳಿ ಅಧ್ಯಕ್ಷರ ಪಟ್ಟಿಯಲ್ಲಿ ಸಂಗಮೇಶ್ವರ್ ಅವರ ಹೆಸರಿದ್ದಿದ್ದು ಅವರನ್ನು ಕೆರಳಿಸಿತ್ತು. ಬೆಂಬಲಿಗರ ಸಭೆ ನಡೆಸಿ ಮುಂದಿನ ನಿರ್ಧಾರ ಪ್ರಕಟಿಸಿವುದಾಗಿಯೂ ಘೋಷಿಸಿದ್ದರು. ಕೊನೆಗೆ, ವಿಚಾರ ತಿಳಿಯುತ್ತಿದ್ದಂತೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಗಮೇಶ್ವರ್ ಅವರೊಂದಿಗೆ ಮಾತನಾಡಿದ್ದಾರೆ. ಸಮಾಧಾನಪಡಿಸಿ, ಭವಿಷ್ಯದಲ್ಲಿ ಸಚಿವ ಸ್ಥಾನದ ಭರವಸೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494
ಈ ಮೇಲ್ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200