Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » SHIMOGA | ನಾಲ್ಕು ರೈಲ್ವೆ ಮೇಲ್ಸೇತುವೆ, ಕೆಳ ಸೇತುವೆ, ಮಾರ್ಚ್‌ನಿಂದ ಕಾಮಗಾರಿ ಶುರು, ಬರ್ತಾರೆ ರೈಲ್ವೆ ಮಿನಿಸ್ಟರ್

SHIMOGA | ನಾಲ್ಕು ರೈಲ್ವೆ ಮೇಲ್ಸೇತುವೆ, ಕೆಳ ಸೇತುವೆ, ಮಾರ್ಚ್‌ನಿಂದ ಕಾಮಗಾರಿ ಶುರು, ಬರ್ತಾರೆ ರೈಲ್ವೆ ಮಿನಿಸ್ಟರ್

28/01/2021 5:07 PM
ನಿತಿನ್‌ ಕೈದೊಟ್ಲು

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 JANUARY 2021

ಸಂಚಾರ ದಟ್ಟಣೆ ತಗ್ಗಿಸುವ ಉದ್ದೇಶದಿಂದ ಶಿವಮೊಗ್ಗ ನಗರ ಮತ್ತು ಭದ್ರಾವತಿಯಲ್ಲಿ ರೈಲ್ವೇ ಮೇಲ್ಸೇತುವೆ ಮತ್ತು ಕೆಳಸೇತುವೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಈಗಾಗಲೇ ಅನುದಾನ ಬಿಡುಗಡೆಗೊಳಿಸಿದೆ. ಆದಷ್ಟು ಬೇಗನೆ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಂಸತ್ ಸದಸ್ಯ ಬಿ.ವೈ.ರಾಘವೇಂದ್ರ ಅವರು ತಿಳಿಸಿದರು.

143057480 1317603001934450 6042132597043412254 o.jpg? nc cat=102&ccb=2& nc sid=8bfeb9& nc ohc= ZC2rNfkWFkAX8hOFyd& nc ht=scontent.fblr4 1

ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಕುರಿತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಶಿವಮೊಗ್ಗ ನಗರದ ಸವಳಂಗ ರಸ್ತೆ, ಕಾಶಿಪುರ ಹಾಗೂ ಭದ್ರಾವತಿಯಲ್ಲಿ ಒಟ್ಟು  4 ರೈಲ್ವೇ ಸೇತುವೆಗಳ ನಿರ್ಮಾಣಕ್ಕೆ ಅನುಮೋದನೆ ದೊರೆತಿದೆ.

ಸವಳಂಗ ರಸ್ತೆಯಲ್ಲಿ ರೈಲ್ವೇ ಮೇಲ್ಸೇತುವೆ ಮತ್ತು ಕೆಳಸೇತುವೆ ನಿರ್ಮಾಣಕ್ಕೆ ಸರ್ಕಾರ 60.76 ಕೋಟಿ ರೂ. ಬಿಡುಗಡೆ ಮಾಡಿದೆ.

ಇಲ್ಲಿ ಭೂಸ್ವಾಧೀನ ಪ್ರಕ್ರಿಯೆ, ವಿದ್ಯುತ್ ಕಂಬಗಳ ಸ್ಥಳಾಂತರ ಇತ್ಯಾದಿ ಕಾರ್ಯಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಬೇಕು.

ಕಾಶಿಪುರ ರೈಲ್ವೇ ಕ್ರಾಸಿಂಗ್ ಬಳಿ ಮೇಲ್ಸೇತುವೆ ನಿರ್ಮಾಣಕ್ಕೆ 30ಕೋಟಿ ರೂ. ಬಿಡುಗಡೆ ಮಾಡಲಾಗಿದೆ.

ಭದ್ರಾವತಿಯಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ 49ಕೋಟಿ ರೂ. ಬಿಡುಗಡೆಯಾಗಿದೆ ಎಂದು ರಾಘವೇಂದ್ರ ತಿಳಿಸಿದರು.

ಪರ್ಯಾಯ ರಸ್ತೆ

ಮಾರ್ಚ್ ಒಂದರಂದು ಎಲ್ಲಾ ಕಾಮಗಾರಿಗಳನ್ನು ಆರಂಭಿಸಲು ಪೂರ್ವ ಸಿದ್ಧತೆಗಳನ್ನು ಪೂರ್ಣಗೊಳಿಸಬೇಕು. ಎಲ್ಲಾ ರೈಲ್ವೇ ಸೇತುವೆಗಳ ನಿರ್ಮಾಣ ಕಾರ್ಯವನ್ನು ದಾಖಲೆ ಸಮಯದ ಒಳಗಾಗಿ ಪೂರ್ಣಗೊಳಿಸಲು ಸೂಚಿಸಲಾಗಿದೆ. ಕಾಮಗಾರಿ ಅವಧಿಯಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗಗಳನ್ನು ಗುರುತಿಸಲಾಗುತ್ತಿದೆ. ಸಾರ್ವಜನಿಕರಿಗೆ ಹೆಚ್ಚಿನ ಅನಾನುಕೂಲತೆಗಳು ಆಗದಂತೆ ಸೂಕ್ತ ಪರ್ಯಾಯ ರಸ್ತೆಗಳನ್ನು ಕಲ್ಪಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಶಿಕಾರಿಪುರ – ರಾಣೆಬೆನ್ನೂರು ಮಾರ್ಗಕ್ಕೆ ಭೂಸ್ವಾಧೀನ

ಜಿಲ್ಲೆಯಲ್ಲಿ ರೈಲ್ವೇ ಕೋಚಿಂಗ್ ಡಿಪೋ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಈಗಾಗಲೇ 60 ಕೋಟಿ ರೂ. ಬಿಡುಗಡೆಗೆ ಅನುಮೋದನೆ ನೀಡಿದೆ. ಶಿಕಾರಿಪುರ – ರಾಣೆಬೆನ್ನೂರು ರೈಲ್ವೇ ಹಳಿ ನಿರ್ಮಾಣ ಕಾಮಗಾರಿಯ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದ್ದು, ಪ್ರಥಮ ಹಂತದ ಕಾಮಗಾರಿಗಳಿಗೆ ಟೆಂಡರ್ ಕರೆಯುವ ಪ್ರಕ್ರಿಯೆ ಹಂತದಲ್ಲಿದೆ. ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಭೂಸ್ವಾಧೀನ ಪ್ರಕ್ರಿಯೆ ಮತ್ತು ಕಾಮಗಾರಿಗಳ ಅನುಷ್ಟಾನಗೊಳಿಸಲಾಗುತ್ತಿದೆ. ರಾಜ್ಯ ಸರ್ಕಾರ ತನ್ನ ಪಾಲಿನ ಅನುದಾನವನ್ನು ಈಗಾಗಲೇ ಬಿಡುಗಡೆ ಮಾಡಿದೆ. ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಐತಿಹಾಸಿಕ ಬದಲಾವಣೆಗಳನ್ನು ಕಾಣಬಹುದಾಗಿದೆ ಎಂದು ಅವರು ಹೇಳಿದರು.

ಕೇಂದ್ರ ರೈಲ್ವೇ ಸಚಿವರ ಆಗಮನ

ಜಿಲ್ಲೆಯಲ್ಲಿ ನಡೆಯುತ್ತಿರುವ ರೈಲ್ವೇ ಯೋಜನೆಗಳಿಗೆ ಚಾಲನೆ ನೀಡಲು ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ಅವರು ಮಾರ್ಚ್ ಮೊದಲ ವಾರದಲ್ಲಿ ಶಿವಮೊಗ್ಗಕ್ಕೆ ಆಗಮಿಸುವ ಸಾಧ್ಯತೆಯಿದೆ. ಸಚಿವರು ಆ ಸಂದರ್ಭದಲ್ಲಿ ರೈಲ್ವೇ ಕಾಮಗಾರಿಗಳ ಭೂಮಿಪೂಜೆ ಮತ್ತು ಉದ್ಘಾಟನೆ ಕಾರ್ಯಗಳನ್ನು ನೆರವೇರಿಸಲಿದ್ದಾರೆ ಎಂದು ಅವರು ತಿಳಿಸಿದರು.

VIDEO REPORT

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಮಹಾನಗರ ಪಾಲಿಕೆ ಮೇಯರ್ ಸುವರ್ಣಾ ಶಂಕರ್, ಸೂಡಾ ಅಧ್ಯಕ್ಷ ಜ್ಯೋತಿ ಪ್ರಕಾಶ್, ಆಯುಕ್ತ ಚಿದಾನಂದ ವಟಾರೆ, ರೈಲ್ವೇ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ [email protected]

» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

June-2025-Report-Shivamogga-Live

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Corruption-ACB-Raid-1.jpg BHADRAVATHI | ಹೊಳೆಹೊನ್ನೂರಿನಲ್ಲಿ ಎಸಿಬಿ ದಾಳಿ, ಮೆಸ್ಕಾಂ ಎಂಜಿನಿಯರ್ ಅರೆಸ್ಟ್
Next Article JOBS-General-Imag SHIMOGA JOBS | ಪ್ರತಿಷ್ಠಿತ ಶೋ ರೂಂನಲ್ಲಿ ಉದ್ಯೋಗವಕಾಶ, ಜನವರಿ 29ಕ್ಕೆ ಸಂದರ್ಶನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಇದನ್ನೂ ಓದಿ

HOME

ಶಿವಮೊಗ್ಗ ನಗರದಲ್ಲಿ ಮತ್ತೆರಡು ಕಂಟೈನ್ಮೆಂಟ್ ಜೋನ್ ರಚನೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/08/2021
180621 Kavaledurga Mutt Araga Jnanendra Visit 1
HOME

ತೀರ್ಥಹಳ್ಳಿಯ ಕವಲೇದುರ್ಗದ ಶ್ರೀಗಳ ಪುಣ್ಯಾರಾಧನೆ, ನುಡಿ ನಮನ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/06/2021
050720 Sunday Curfew in Shimoga 1
HOME

ಶಿವಮೊಗ್ಗ ಜಿಲ್ಲೆ ಲಾಕ್ ಡೌನ್, ಕೆಲವು ಸೇವೆಗಳಿಗೆ ವಿನಾಯಿತಿ, ಇಲ್ಲಿದೆ ಲಾಕ್ ಡೌನ್ ಕುರಿತ ಪ್ರಮುಖ ಹತ್ತು ಪಾಯಿಂಟ್

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
30/05/2021
100521 Shimoga Lockdown Day 1 1
HOME

ಇನ್ಮುಂದೆ ಶಿವಮೊಗ್ಗ ಸಿಟಿಯಲ್ಲಿ ಕರೋನ ಪಾಸಿಟಿವ್ ಬಂದರೆ ಹೋಂ ಐಸೊಲೇಷನ್ ಇಲ್ಲ, ಯಾಕೆ? ಮುಂದೇನು ಕಥೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
24/05/2021
200521 Car Glass Breaking CCTV Visuals 1
HOME

ಕಾರು ಗಾಜು ಪುಡಿ ಪುಡಿ ಮಾಡುವ ಸಿಸಿಟಿವಿ ವಿಡಿಯೋ ವೈರಲ್, ಇಬ್ಬರು ದುಷ್ಕರ್ಮಿಗಳು ಅರೆಸ್ಟ್

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
20/05/2021
200521 Eshwarappa visit car break area 1
HOME

‘ಇದು ಮುಸ್ಲಿಂ ಗೂಂಡಾಗಳ ಕೃತ್ಯ, ಅಶಾಂತಿ ಉಂಟು ಮಾಡುವುದೆ ಇವರ ಧ್ಯೇಯ’, ಗಂಭೀರ ಆರೋಪ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
20/05/2021
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?