ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 20 ಮೇ 2020
ಹೊರ ರಾಜ್ಯ ಮತ್ತು ಜಿಲ್ಲೆಯಿಂದ ಬಂದವರನ್ನು ತಮ್ಮ ಏರಿಯಾದ ಹಾಸ್ಟೆಲ್‍ನಲ್ಲಿ ಕ್ವಾರಂಟೈನ್ ಮಾಡುವುದನ್ನು ವಿರೋಧಿಸಿ ಸ್ಥಳೀಯರು ದಿಢೀರ್ ಪ್ರತಿಭಟನೆ ನಡೆಸಿದರು. ಅಲ್ಲದೆ ಹಾಸ್ಟೆಲ್ ಒಳಗಿದ್ದ ಚೇರು, ಟೇಬಲ್, ಸಿಸಿಟಿವಿ ಕ್ಯಾಮರಾಗಳನ್ನು ಧ್ವಂಸ ಮಾಡಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ನಗರದ ಬಾಪೂಜಿನಗರದಲ್ಲಿ ಘಟನೆ ನಡೆದಿದೆ. ಇಲ್ಲಿನ ಸರ್ಕಾರಿ ಹಾಸ್ಟೆಲ್‍ನಲ್ಲಿ ಜಿಲ್ಲಾಡಳಿತ ಕ್ವಾರಂಟೈನ್‍ಗೆ ವ್ಯವಸ್ಥೆ ಮಾಡಿದೆ. ಇವತ್ತು ಕೆಲವರನ್ನು ಕ್ವಾರಂಟೈನ್ ಮಾಡಲು ಬಸ್ಸಿನಲ್ಲಿ ಕರೆತರಲಾಗಿತ್ತು. ಈ ವೇಳೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದರು.
ಹಾಸ್ಟೆಲ್ ಒಳನುಗ್ಗಿ ದಾಂಧಲೆ
ಹಾಸ್ಟೆಲ್ ಒಳನುಗ್ಗಿದ ಸ್ಥಳೀಯರು ದಾಂಧಲೆ ನಡೆಸಿದರು. ಯಾವುದೇ ಕಾರಣಕ್ಕೂ ಕ್ವಾರಂಟೈನ್‍ಗೆ ಅವಕಾಶ ಕೊಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಹಾಸ್ಟೆಲ್ ಒಳಗಿನ ಚೇರು, ಟೇಬಲ್, ಸಿಸಿ ಕ್ಯಾಮರಾ, ಗಿಡಗಳ ಪಾಟ್‍ಗಳನ್ನು ಒಡೆದು ಹಾಕಿದ್ದಾರೆ. ಕೆಲವರು ಹಾಸ್ಟೆಲ್‍ನತ್ತ ಕಲ್ಲು ತೂರಿದ್ದಾರೆ.
ಲಘು ಲಾಠಿ ಪ್ರಹಾರ
ಉದ್ರಿಕ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಕೊನೆಗೆ ಅನಿವಾರ್ಯವಾಗಿ ಲಘು ಲಾಠಿ ಪ್ರಹಾರ ನಡೆಸಿದರು. ಹಾಸ್ಟೆಲ್ ಒಳಗಿನಿಂದ ಸ್ಥಳೀಯರನ್ನು ಹೊರಗೆ ಕಳುಹಿಸಲಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣವಿದೆ. ಹೆಚ್ಚುವರಿಯಾಗಿ ಪೊಲೀಸರನ್ನು ನಿಯೋಜಿಸಲಾಗಿದೆ.
ಸಿಡಿದೆದ್ದ ಉಪ ಮೇಯರ್
ಇದೇ ವೇಳೆ ಸ್ಥಳಕ್ಕೆ ಆಗಮಿಸಿದ ಉಪ ಮೇಯರ್ ಸುರೇಖಾ ಮುರಳೀಧರ್ ಅವರು ಸ್ಥಳೀಯರ ಜೊತೆ ಧ್ವನಿಗೂಡಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]