ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 6 APRIL 2021
ವಿಶೇಷ ತನಿಖಾ ತಂಡ (ಎಸ್‍ಐಟಿ) ಸ್ವತಂತ್ರವಾಗಿ ತನಿಖೆ ನಡೆಸುತ್ತಿದ್ದು, ಕಾನೂನು ಚೌಕಟಿನಲ್ಲಿ ಕೆಲಸ ನಿರ್ವಹಿಸುತ್ತಿದೆ. ಹಾಗಾಗಿ ಯಾರೊಬ್ಬರು ಎಸ್‍ಐಟಿ ಹೀಗೆ ಕೆಲಸ ಮಾಡಬೇಕು, ಹಾಗೆ ಮಾಡಬೇಕು ಎಂದು ಟೀಕೆ ಟಿಪ್ಪಣಿ ಮಾಡಬಾರದು ಎಂದು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಜಿಪಿ ಪ್ರವೀಣ್ ಸೂದ್, ಎಸ್‍ಐಟಿ ಯಾವ ರೀತಿ ಕೆಲಸ ಮಾಡುತ್ತಿದೆ ಎಂದು ಬೆಂಗಳೂರು ಕಮಿಷನರ್ ಅವರು ಈಗಾಗಲೇ ಮಾಧ್ಯಮಗಳಿಗೆ ತಿಳಸುತ್ತಿದ್ದಾರೆ. ಎಸ್‍ಐಟಿ ತನಿಖೆಯ ಬಗ್ಗೆ ನ್ಯಾಯಾಲಯ ಮಾಹಿತಿ ಕೇಳಿದೆ. ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗುತ್ತದೆ ಎಂದು ಹೇಳಿದರು.
ಸದ್ಯದಲ್ಲೇ ಚಾರ್ಚ್ ಶೀಟ್
ಶಿವಮೊಗ್ಗದ ಹುಣಸೋಡು ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಸ್ಪೋಟ ಪ್ರಕರಣ ಸಂಬಂಧ ಸದ್ಯದಲ್ಲೆ ಚಾರ್ಜ್ ಶೀಟ್ ಸಲ್ಲಿಕೆಯಾಗಲಿದೆ. ಆಗ ಸ್ಪೋಟದ ಕುರಿತು ಸಂಪೂರ್ಣ ಮಾಹಿತಿ ಸಾರ್ವಜನಿಕವಾಗಿ ಲಭ್ಯವಾಗಲಿದೆ ಎಂದರು.
ಇದನ್ನೂ ಓದಿ | ಶಿವಮೊಗ್ಗಕ್ಕೆ ಪೊಲೀಸ್ ಮಹಾನಿರ್ದೇಶಕರ ಭೇಟಿ, ಮಹತ್ವದ ಮೀಟಿಂಗ್
ಇನ್ನು, ಶಿವಮೊಗ್ಗದಲ್ಲಿ ಪೊಲೀಸ್ ಕಮಿಷನರೇಟ್ ಸ್ಥಾಪನೆ ವಿಚಾರದಲ್ಲಿ ಸರ್ಕಾರ ನಿರ್ಧಾರ ಕೈಗೊಳ್ಳಬೇಕು. ಯಾವುದೆ ನಗರದಲ್ಲಿ ಹತ್ತು ಲಕ್ಷ ಜನಸಂಖ್ಯೆ ಇದ್ದರಷ್ಟೇ ಕಮಿಷನರೇಟ್ ಸ್ಥಾಪನೆ ಮಾಡಲಾಗುತ್ತದೆ. ಶಿವಮೊಗ್ಗದಲ್ಲಿ ಕಮಿಷನರೇಟ್ ಸ್ಥಾಪನೆ ವಿಚಾರ ಸರ್ಕಾರಕ್ಕೆ ಬಿಟ್ಟಿದ್ದು ಎಂದು ಪ್ರವೀಣ್ ಸೂದ್ ತಿಳಿಸಿದರು
ಅಧಿಕಾರಿಗಳ ಜೊತೆ ಮಹತ್ವದ ಮೀಟಿಂಗ್
ಬೆಳಗ್ಗೆ ಶಿವಮೊಗ್ಗಕ್ಕೆ ಆಗಮಿಸಿರುವ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು, ಡಿಎಆರ್ ಸಭಾಂಗಣದಲ್ಲಿ ಮಹತ್ವದ ಮೀಟಿಂಗ್ ನಡೆಸಿದರು. ಪೂರ್ವ ವಲಯ ಐಜಿಪಿ ರವಿ, ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್, ಹೆಚ್ಚುವರಿ ರಕ್ಷಣಾಧಿಕಾರಿ ಹೆಚ್.ಟಿ.ಶೇಖರ್, ಜಿಲ್ಲೆಯ ಡಿವೈಎಸ್‍ಪಿಗಳು, ಇನ್ಸ್‍ಪೆಕ್ಟರ್‍ಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422