ಶಿವಮೊಗ್ಗ ಲೈವ್.ಕಾಂ | SHIMOGA NEWS | 20 MAY 2021
ಹಳೆ ಶಿವಮೊಗ್ಗ ಭಾಗದಲ್ಲಿ ಕಾರು, ಬೈಕು, ಆಟೋಗಳನ್ನು ಜಖಂ ಮಾಡಿದ ವಿಚಾರ ತಿಳಿಯುತ್ತಿದ್ದಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಾರುಗಳ ಗಾಜು ಪುಡಿ ಪುಡಿಯಾಗಿರುವುದು, ಬೈಕುಗಳನ್ನು ಒಡೆದು ಹಾಕಿರುವುದನ್ನು ಗಮನಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಸ್ಥಳೀಯರಿಂದ ಮಾಹಿತಿ ಪಡೆದುಕೊಂಡರು. ಪೊಲೀಸರಿಂದ ವಿವರಣೆ ಕೇಳಿದರು.
‘ಮುಸ್ಲಿಂ ಗೂಂಡಾಗಳದ್ದೇ ಕೈವಾಡ’
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ ಈ ಕೃತ್ಯದ ಹಿಂದೆ ಮುಸ್ಲಿಂ ಗೂಂಡಾಗಳ ಕೈವಾಡವಿದೆ ಎಂದು ಆರೋಪಿಸಿದರು.
ಇನ್ನು, ಸಂಸದ ಬಿ.ವೈ.ರಾಘವೇಂದ್ರ ಪ್ರತಿಕ್ರಿಯೆ ನೀಡಿ, ಈ ಕೃತ್ಯದ ಹಿಂದೆ ಗಾಂಜಾ ಮತ್ತು ಮಾತ್ರವಲ್ಲ, ಬೇರೆನೋ ಪ್ರಮುಖ ಕಾರಣವಿದ್ದಂತಿದೆ. ಇದರ ಬಗ್ಗೆ ಆಳವಾದ ತನಿಖೆ ಅವಶ್ಯಕತೆ ಇದೆ ಎಂದು ತಿಳಿಸಿದರು. ಸಚಿವರು, ಸಂಸದರ ಭೇಟಿ, ಹೇಳಿಕೆಯ ವಿಡಿಯೋ ಇಲ್ಲಿದೆ.
17 ಕಾರುಗಳು, 20ಕ್ಕೂ ಹೆಚ್ಚು ಬೈಕುಗಳು, ಒಂದು ಆಟೋಗೆ ದುಷ್ಕರ್ಮಿಗಳು ಹಾನಿ ಮಾಡಿದ್ದಾರೆ. ಗಾಜು ಪುಡು ಪುಡಿ ಮಾಡುತ್ತಿದ್ದಂತೆ ಸ್ಥಳೀಯರು ಎಚ್ಚರವಾಗಿದ್ದು, ಇಬ್ಬರನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಸಚಿವ ಈಶ್ವರಪ್ಪ ತಿಳಿಸಿದ್ದಾರೆ.
ಇದನ್ನೂ ಓದಿ | ಶಿವಮೊಗ್ಗ ಗಾಂಧಿ ಬಜಾರ್ ಸುತ್ತಮುತ್ತ ಮನೆ ಮುಂದೆ ನಿಲ್ಲಿಸಿದ್ದ ಸಾಲು ಸಾಲು ಕಾರುಗಳ ಗ್ಲಾಸ್ ಪೀಸ್ ಪೀಸ್
ಹಳೆ ಶಿವಮೊಗ್ಗ ಭಾಗದಲ್ಲಿ ಇಂತಹ ಪ್ರಕರಣಗಳು ಇದೇ ಮೊದಲೇನಲ್ಲ. ಈ ಹಿಂದೆ ಹಲವು ಭಾರಿ ಕಾರುಗಳ ಗಾಜು ಪುಡಿ ಮಾಡಿರುವುದು, ಆಟೋಗೆ ಬೆಂಕಿ ಹಚ್ಚಿದ್ದ ಘಟನೆಗಳು ನಡೆದಿವೆ. ಈ ಭಾರಿ ದೊಡ್ಡ ಸಂಖ್ಯೆಯ ವಾಹನಗಳಿಗೆ ಹಾನಿ ಮಾಡಲಾಗಿದೆ. ಇದರಿಂದ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200