ಶಿವಮೊಗ್ಗ ಲೈವ್.ಕಾಂ | 18 ಡಿಸೆಂಬರ್ 2018
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಹೋರಿ ಬೆದರಿಸುವ ಸ್ಪರ್ಧೆ ನೋಡಲು ಜನ ನಿಂತಿದ್ದ ನಿರ್ಮಾಣ ಹಂತದ ಮನೆಯ ಸಜ್ಜ ಕುಸಿದು ಓರ್ವ ಸಾವನ್ನಪ್ಪಿದ್ದು, 17ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇನ್ನು, ಹೋರಿ ಇರಿದು ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ಸಜ್ಜ ಕುಸಿದಿದ್ದು ಏಕೆ?

ಸೊರಬ ತಾಲೂಕು ಕುಪ್ಪಗಡ್ಡೆ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ಏರ್ಪಡಿಸಲಾಗಿತ್ತು. ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದರು. ನಿರ್ಮಾಣ ಹಂತದ ಕಟ್ಟಡದ ಮೇಲೆ ನಿಂತು ಜನರ ಸ್ಪರ್ಧೆ ವೀಕ್ಷಿಸುತ್ತಿದ್ದರು. ಅದರ ಸಜ್ಜೆಯ ಮೇಲೂ ಜನ ನಿಂತಿದ್ದರು. ಭಾರ ತಾಳಲಾರದೆ ಸಜ್ಜ ದಿಢೀರ್ ಕುಸಿದಿದೆ. ಇದರಿಂದ ಆನವಟ್ಟಿ ಸಮೀಪದ ಗದಿಗೆಪ್ಪ (55) ಮೃತಪಟ್ಟಿದ್ದಾರೆ. ಸಜ್ಜ ಕೆಳಗೆ ನಿಂತಿದ್ದ ಕುಪ್ಪಗಡ್ಡೆಯ ಮಂಡಕ್ಕಿ ಬಸಪ್ಪ ಎಂಬ ವೃದ್ಧೆ ಸ್ಥತಿ ಗಂಭೀರವಾಗಿದೆ. ಉಳಿದವರಿಗೆ ಸೊರಬ ಮತ್ತು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಒಬ್ಬನಿಗೆ ತಿವಿದ ಹೋರಿ
ಇನ್ನು, ಸ್ಪರ್ಧೆಯ ಸಂದರ್ಭ, ಹೋರಿ ತಿವಿದು ಚೆಬ್ಬಿಹಳ್ಳಿಯ ಶಿವಪ್ಪ (55) ಎಂಬುವವರು ಗಾಯಗೊಂಡಿದ್ದಾರೆ. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಿಕಿತ್ಸೆ ನಡೆಯುತ್ತಿದೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494
ಈ ಮೇಲ್ | shivamoggalive@gmail.com
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





