ಶಿವಮೊಗ್ಗ ಲೈವ್.ಕಾಂ | SHIMOGA NEWS | 14 MARCH 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಕಾಂಗ್ರೆಸ್ ಪಕ್ಷದ ವತಿಯಿಂದ ಶಿವಮೊಗ್ಗದಲ್ಲಿ ಆಯೋಜಿಸಿದ್ದ ಜನಾಕ್ರೋಶ ಪ್ರತಿಭಟನೆ ಹಿನ್ನೆಲೆ, ಬೃಹತ್ ಮೆರವಣಿಗೆ ನಡೆಸಲಾಯಿತು. ಕಾಂಗ್ರೆಸ್ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಮೆರವಣಿಗೆಯಲ್ಲ ಭಾಗವಹಿಸಿದ್ದರು.
ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಿಂದ ಆರಂಭವಾದ ಮೆರವಣಿಗೆ ಸೈನ್ಸ್ ಮೈದಾನದವರೆಗೆ ನಡೆಯಿತು.
ಲಾರಿ ಏರಿದ ಮುಖಂಡರು
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಮಾಜಿ ಸಚಿವರು, ಶಾಸಕರು, ಮುಖಂಡರು ಲಾರಿ ಏರಿ, ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ದಾರಿ ಉದ್ದಕ್ಕೂ ಜನರತ್ತ ಕೈ ಬೀಸುತ್ತ, ಕೈ ಮುಗಿಯುತ್ತ ಕಾರ್ಯಕರ್ತರ ಉತ್ಸಾಹ ಹೆಚ್ಚಿಸಿದರು.
ಶಿವಪ್ಪನಾಯಕನಿಗೆ ಹೂ ಮಳೆ
ಶಿವಪ್ಪನಾಯಕ ಪ್ರತಿಮೆಗೆ ಹೂ ಮಳೆ ಸುರಿಸಲಾಯಿತು. ಮಾಜಿ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ ಲಾರಿಯಲ್ಲಿದ್ದ ಎಲ್ಲಾ ಮುಖಂಡರು, ಪುಷ್ಪ ನಮನ ಸಲ್ಲಿಸಿದರು. ಈ ವೇಳೆ ಕಾರ್ಯಕರ್ತರು ಘೋಷಣೆ ಕೂಗಿದರು.
ನಡೆದು ಬಂದ ಸಂಗಮೇಶ್ವರ್
ಇನ್ನು, ಮೆರವಣಿಗೆಯ ಹಾದಿಯುದ್ದಕ್ಕೂ ಭದ್ರಾವತಿ ಶಾಸಕ ಸಂಗಮೇಶ್ವರ್ ಅವರು ನಡೆದು ಬಂದರು. ಕಾರ್ಯಕರ್ತರ ಜೊತೆಗೆ ನಡೆದು ಬಂದ ಸಂಗಮೇಶ್ವರ್ ಅವರು, ಅಲ್ಲಲ್ಲಿ ಜನರೊಂದಿಗೆ ಮಾತನಾಡಿದರು, ತಮಗಾದ ನೋವು ಹಂಚಿಕೊಂಡರು.
ತಮಟೆ, ಡಾನ್ಸು, ಘೋಷಣೆ
ಮೆರವಣಿಗೆ ಹಾದಿಯುದ್ದಕ್ಕೂ ಕಾರ್ಯಕರ್ತರು ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಶಾಸಕ ಸಂಗಮೇಶ್ವರ್ ಅವರ ಪರವಾಗಿ ಘೋಷಣೆ ಕೂಗಿದರು. ಕೆಲವು ಕಡೆ ತಮಟೆ ಸದ್ದಿಗೆ ಭರ್ಜರಿ ಡಾನ್ಸ್ ಮಾಡಿದರು.






ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






