ಶಿವಮೊಗ್ಗ ಲೈವ್.ಕಾಂ | 11 ಮೇ 2019
ತಿರುಕ ರಾತ್ರಿ ಕನಸು ಕಾಣುತ್ತಿದ್ದ. ಸಿದ್ದರಾಮಯ್ಯ ಹಗಲುಗನಸು ಕಾಣುತ್ತಿದ್ದಾರೆ. ಪದೇ ಪದೇ ಮುಖ್ಯಮಂತ್ರಿ ಆಗುತ್ತೇನೆ ಅನ್ನುತ್ತಿರುವ ಸಿದ್ದರಾಮಯ್ಯ ಮತ್ತು ಅವರ ಚೇಲಾಗಳನ್ನು ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಸೃಷ್ಟಿಸುತ್ತಿದ್ದಾರೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈಶ್ವರಪ್ಪ, ತಮ್ಮಿಂದಾಗಿಯೇ ಕಾಂಗ್ರೆಸ್ ಪಕ್ಷ ಕಳೆದ ಚುನಾವಣೆಯಲ್ಲಿ ಸೋಲನುಭವಿಸಿದೆ ಎಂಬುದು ಸಿದ್ದರಾಮಯ್ಯ ಅವರಿಗೆ ಗೊತ್ತಿದೆ. ಹಾಗಿದ್ದೂ ಅವರ ಚೇಲಾಗಳು, ಸಿದ್ದರಾಮಯ್ಯ ಪುನಃ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಈ ಮೂಲಕ ಅಸ್ಥಿರತೆ ಸೃಷ್ಟಿಸುತ್ತಿದ್ದಾರೆ ಎಂದರು.
ಕಾಂಗ್ರೆಸ್’ನಲ್ಲಿ ಸಿದ್ದು ಬಣ, ಬಟ್ಟೆ ಹಾವಿನ ಬಣ
ಕಾಂಗ್ರೆಸ್ ಪಕ್ಷದಲ್ಲಿ ಎರಡು ಬಣಗಳಿವೆ ಎಂದ ಈಶ್ವರಪ್ಪ, ಒಂದು ಸಿದ್ದರಾಮಯ್ಯ ಮತ್ತು ಅವರ ಚೇಲಾಗಳ ಬಣ. ಮತ್ತೊಂದು ಬಟ್ಟೆ ಹಾವಿನ ಬಣ ಎಂದರು. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಸೇರಿದಂತೆ ಪ್ರಮುಖರು ಈ ಬಟ್ಟೆ ಹಾವಿನ ಬಣದಲ್ಲಿದ್ದಾರೆ. ಪದೇ ಪದೇ ಸಿದ್ದರಾಮಯ್ಯ ತಾವು ಮುಖ್ಯಮಂತ್ರಿ ಆಗುವುದಾಗಿ ಹೇಳಿಕೆ ನೀಡುತ್ತಿದ್ದರೂ, ಕಾಂಗ್ರೆಸ್ ಪಕ್ಷ ಕ್ರಮ ಕೈಗೊಳ್ಳುತ್ತಿಲ್ಲ. ಕ್ರಮ ತೆಗೆದುಕೊಳ್ಳಬೇಕಿರುವವರು ಬಟ್ಟೆ ಹಾವುಗಳಂತಾಗಿದ್ದಾರೆ ಎಂದು ಲೇವಡಿ ಮಾಡಿದರು.
ಸಿದ್ದರಾಮಯ್ಯ ಸಿಎಂ ಆಗಲ್ಲ, ರಾಹುಲ್ ಗಾಂಧಿ ಮದುವೆಯಾಗಲ್ಲ
ಸಿದ್ದರಾಮಯ್ಯ ಇನ್ನೆಂದು ಮುಖ್ಯಮಂತ್ರಿಯಾಗುವುದಿಲ್ಲ, ರಾಹುಲ್ ಗಾಂಧಿ ಮದುವೆಯಾಗುವುದಿಲ್ಲ ಎಂದು ಟಾಂಗ್ ನೀಡಿದ ಈಶ್ವರಪ್ಪ, ದಲಿತ ಮುಖ್ಯಮಂತ್ರಿ ಕುರಿತು ಸಿದ್ದರಾಮಯ್ಯ ಅವರು ಈಗೇಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು. ತಾವು ಸಿಎಂ ಆಗಿದ್ದಾಗ, ರಾಜ್ಯಕ್ಕೆ ದಲಿತ ಮುಖ್ಯಮಂತ್ರಿ ಬೇಕು ಎಂದು ವಾದಿಸಿದ್ದ ಸಿದ್ದರಾಮಯ್ಯ ಅವರು ಈಗೇಕೆ ತಾವೇ ಸಿಎಂ ಆಗಬೇಕು ಎಂದು ಹೇಳಿಕೆ ನೀಡುತ್ತಿದ್ದಾರೆ ಎಂದು ಪ್ರಶ್ನಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಗೌಡ, ಮಹಾನಗರ ಪಾಲಿಕೆ ಉಪಮೇಯರ್ ಚನ್ನಬಸಪ್ಪ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200