ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | 3 ಜನವರಿ 2019
ರಾಜ್ಯ ಸರ್ಕಾರದ ಸಾಲಮನ್ನಾ ಯೋಜನೆಯನ್ನು ಬಿಜೆಪಿ ಮುಖಂಡರು ಹಳದಿ ಕಣ್ಣಿನಿಂದ ನೋಡುವುದನ್ನು ಬಿಡಬೇಕು ಅಂತಾ ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಎಂ.ಮಂಜುನಾಥಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾಲಮನ್ನಾ ಯೋಜನೆಯ ಸಂಪೂರ್ಣ ಮಾಹಿತಿಯನ್ನೇ ತಿಳಿಯದೇ, ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಮುಖಂಡರು, ಹಣವೇ ಬಿಡುಗಡೆಯಾಗಿಲ್ಲ, 800 ರೈತರಿಗಷ್ಟೇ ಸಾಲ ಮನ್ನಾ ಆಗಿದೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಹಾಗಾದರೆ ಕೇಂದ್ರ ಸರ್ಕಾರದಿಂದ ಎಷ್ಟು ರೈತರ ಸಾಲ ಮನ್ನಾ ಆಗಿದೆ ಎಂಬುದನ್ನು ಉತ್ತರಿಸಲಿ ಎಂದು ಮಂಜುನಾಥಗೌಡ ಸವಾಲು ಹಾಕಿದರು.
ಶಿವಮೊಗ್ಗಕ್ಕೆ 1300 ಕೋಟಿ ಸಾಲ ಮನ್ನಾ
ರಾಜ್ಯ ಸರ್ಕಾರದ ಸಾಲ ಮನ್ನಾ ಯೋಜನೆಯಿಂದ ಜಿಲ್ಲೆಯ ರೈತರ 1300 ಕೋಟಿ ರೂ. ಸಾಲಮನ್ನಾ ಆಗಲಿದೆ. ಜಿಲ್ಲೆಯ ಡಿಸಿಸಿ ಬ್ಯಾಂಕ್ ಒಂದರಲ್ಲೇ 412 ಕೋಟಿ ರೂ. ಸಾಲ ಮನ್ನಾ ಆಗಲಿದೆ. ಸಿದ್ದರಾಮಯ್ಯ ಅವರು ಅವಧಿಯಲ್ಲಿ 70 ಸಾವಿರ ರೈತರ ಸಾಲಮನ್ನಾ ಆಗಿತ್ತು. ಕುಮಾರಸ್ವಾಮಿ ಅವರ ಸರ್ಕಾರದಲ್ಲಿ 34 ಸಾವಿರ ರೈತರ ಸಾಲಮನ್ನಾ ಆಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ನಾಗರಾಜ್ ಕಂಕಾರಿ, ರಾಮಕೃಷ್ಣ, ಶಿಮುಲ್ ಅಧ್ಯಕ್ಷ ವಿದ್ಯಾಧರ, ಎಪಿಎಂಸಿ ಅಧ್ಯಕ್ಷ ದುಗ್ಗಪ್ಪಗೌಡ ಸೇರಿದಂತೆ ಹಲವರು ಇದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494
ಈ ಮೇಲ್ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422