ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಪ್ಲಾಟ್‌ಫಾರಂಗೆ ಲಿಫ್ಟ್, ಅರಸಾಳು ರೈಲ್ವೆ ನಿಲ್ದಾಣದ ‘ಮಾಲ್ಗುಡಿ ಮ್ಯೂಸಿಯಂ’ಗೆ ಚಾಲನೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಆಗಸ್ಟ್ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ-ಶಿಕಾರಿಪುರ-ರಾಣೇಬೆನ್ನೂರು ರೈಲ್ವೇ ಮಾರ್ಗದ ಭೂಸ್ವಾಧೀನ ಪ್ರಕ್ರಿಯೆ ಮುಗಿದ ತಕ್ಷಣ ಯೋಜನೆ ಕಾಮಗಾರಿ ಅನುಷ್ಟಾನಗೊಳಿಸಲಾಗುವುದು ಎಂದು ಎಂದು ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ ತಿಳಿಸಿದರು.

ಶಿವಮೊಗ್ಗ ಮುಖ್ಯ ರೈಲು ನಿಲ್ದಾಣದಲ್ಲಿ ಲಿಫ್ಟ್ ಹಾಗೂ ಅರಸಾಳು ನಿಲ್ದಾಣದಲ್ಲಿ ಮೂಲಸೌಕರ್ಯಗಳು, ಸ್ಟೇಷನ್ ಬಿಲ್ಡಿಂಗ್ (ಮ್ಯೂಸಿಯಂ ಬಿಲ್ಡಿಂಗ್) ಹಾಗೂ ವಿಸ್ತರಣೆಗೊಂಡ ರೈಲ್ವೆ ಫ್ಲಾಟ್ ಫಾರ್ಮ್ ಕಾಮಗಾರಿಗಳನ್ನು ವರ್ಚುವಲ್ ವೇದಿಕೆಯ ಮೂಲಕ ತಮ್ಮ ಬೆಳಗಾವಿ ಕಚೇರಿಯಿಂದಲೇ ಉದ್ಘಾಟಿಸಿ ಅವರು ಮಾತನಾಡಿದರು.

994 ಕೋಟಿ ರೂಪಾಯಿ ವೆಚ್ಚದಲ್ಲಿ ಶಿವಮೊಗ್ಗ-ರಾಣೇಬೆನ್ನೂರ ಹೊಸ ರೈಲು ಯೋಜನೆ ಅನುಷ್ಟಾನಕ್ಕೆ ಮುಖ್ಯಮಂತ್ರಿಗಳು ಉಚಿತವಾಗಿ ಭೂಮಿ ಒದಗಿಸುವುದರ ಜತೆಗೆ ರಾಜ್ಯ ಸರ್ಕಾರದ ವತಿಯಿಂದ ಶೇ.50 ರಷ್ಟು ಯೋಜನಾ ವೆಚ್ಚವನ್ನು ಭರಿಸುವುದಾಗಿ ತಿಳಿಸಿದ್ದಾರೆ. ಅದೇ ರೀತಿ ದಾವಣಗೆರೆ-ಬೆಂಗಳೂರು ನಡುವೆ ಡಬಲ್ ಲೈನ್ ನಿರ್ಮಾಣಕ್ಕೂ ಜಮೀನು ಒದಗಿಸುವುದಾಗಿ ತಿಳಿಸಿದ್ದಾರೆ. ರೈಲ್ವೆ ಇಲಾಖೆಗೆ ಭೂಮಿ ಹಸ್ತಾಂತರಿಸಿದ ತಕ್ಷಣವೇ ಕಾಮಗಾರಿ ಆರಂಭಿಸಲು ಅಗತ್ಯ ಕ್ರಮವನ್ನು ಇಲಾಖೆಯ ವತಿಯಿಂದ ಕೈಗೊಳ್ಳಲಾಗುವುದು ಎಂದು ಸಚಿವ ಅಂಗಡಿ ತಿಳಿಸಿದರು.

ಶಿವಮೊಗ್ಗ ಪೆಸಿಟ್ ಕಾಲೇಜು ಸಭಾಂಗಣದಲ್ಲಿ ಸಜ್ಜುಗೊಳಿಸಲಾಗಿದ್ದ ವರ್ಚುವಲ್ ವಿಡಿಯೋ ಮೂಲಕ ಸಮಾರಂಭದಲ್ಲಿ ಭಾಗವಹಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಮಾತನಾಡಿ, ಶಿವಮೊಗ್ಗ ರೈಲ್ವೇ ನಿಲ್ದಾಣದಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ ಎರಡು ಲಿಫ್ಟ್‍ಗಳನ್ನು ನಿರ್ಮಿಸಲಾಗಿದ್ದು ಹಿರಿಯ ನಾಗರಿಕರಿಗೆ ಹಾಗೂ ಅಶಕ್ತ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

https://www.facebook.com/liveshivamogga/videos/597251344308379/?t=0

ಇದೇ ರೀತಿ ಆರ್.ಕೆ.ನಾರಾಯಣ್ ಅವರ ಖ್ಯಾತ ಮಾಲ್ಗುಡಿ ಡೇಸ್’ ಕೃತಿಯನ್ನು ಟೆಲಿವಿಷನ್ ಸೀರಿಯಲ್ ಆಗಿ ನಿರ್ಮಿಸಿದ ಶಂಕರನಾಗ್ ಅವರು ಇದೇ ರೈಲ್ವೇ ನಿಲ್ದಾಣವನ್ನು ಪ್ರಮುಖವಾಗಿ ಬಳಸಿಕೊಂಡಿದ್ದಾರೆ. ಇದರ ನೆನಪಿಗಾಗಿ ಸುಮಾರು 25ಲಕ್ಷ ರೂ. ವೆಚ್ಚದಲ್ಲಿ ಹಳೆಯ ಸ್ಟೇಷನನ್ನು ಮಾಲ್ಗುಡಿ ಮ್ಯೂಸಿಯಂ ಆಗಿ ಪರಿವರ್ತಿಸಲಾಗಿದೆ. ಇಲ್ಲಿನ ಪ್ಲಾಟ್‍ಫಾರ್ಮ್ ವಿಸ್ತರಿಸಲಾಗಿದ್ದು, ಪ್ರಸ್ತುತ 12 ಕೋಚ್ ರೈಲುಗಳಿಗೆ ನಿಲುಗಡೆಗೆ ಅವಕಾಶವಿತ್ತು. ಇದೀಗ 28 ಕೋಚ್ ರೈಲುಗಳು ನಿಲ್ಲುವ ಸೌಲಭ್ಯ ಕಲ್ಪಿಸಲಾಗಿದೆ. ಇದೊಂದು ಪ್ರವಾಸಿ ತಾಣವಾಗಿ ಮುಂದಿನ ದಿನಗಳಲ್ಲಿ ಅಭಿವೃದ್ಧಿಯಾಗಲಿದೆ ಎಂದು ಅವರು ಹೇಳಿದರು.

ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ವರ್ಚುವಲ್ ವೇದಿಕೆಯ ಮೂಲಕ ಸಮಾರಂಭದಲ್ಲಿ ಭಾಗವಹಿಸಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment