ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 24 ಅಕ್ಟೋಬರ್ 2020
ರಾಜಕೀಯದಲ್ಲಿ ಇದ್ದವರು ಸಂಕುಚಿತ ಭಾವನೆ ಹೊಂದಿರಬಾರದು. ಭಾಷಣದಲ್ಲಿ ಬುದ್ಧ, ಬಸವ, ಗಾಂಧೀಜಿ ಬಗ್ಗೆ ಮಾತನಾಡುವ ಬದಲು ಅಭಿವೃದ್ಧಿ ಮಾಡಿ ಜನರಿಗೆ ಅನುಕೂಲ ಮಾಡಬೇಕು. ಅಭಿವೃದ್ಧಿ ನಿಟ್ಟಿನಲ್ಲಿ ರಾಜಕೀಯ ಮಾಡಬೇಕು ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಹೊದಲ – ಅರಳಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 4 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಗಾಣಿಗದ್ದೆ ರಸ್ತೆ, ಕೊಪ್ಪಲು ರಸ್ತೆ, ಹುಣಸೆ ಬಯಲು ಸಮುದಾಯ ಭವನ, ಅರಳಾಪುರ – ಮುಂಡಿಗೆಮನೆ ಸಂಪರ್ಕ ಕಿರುಸೇತುವೆ, ಚಿಕ್ಕಹೊದಲ ರಸ್ತೆ, ಹೊದಲ ರಂಗಮಂದಿರ, ಸಮುದಾಯ ಭವನ ಕಾಮಗಾರಿಗಳಿಗೆ ಶಾಸಕ ಆರಗ ಜ್ಞಾನೇಂದ್ರ ಗುದ್ದಲಿ ಪೂಜೆ ನೆರವೇರಿಸಿದರು.
ಜಿಲ್ಲಾ ಪಂಚಾಯಿತಿ ಸದಸ್ಯೆ ಕಲ್ಪನಾ ಪದ್ಮನಾಭ, ತಾಲೂಕು ಪಂಚಾಯಿತಿ ಸದಸ್ಯ ಕುಕ್ಕೆ ಪ್ರಶಾಂತ್ ಸೇರಿದಂತೆ ಹಲವರು ಇದ್ದರು.
ara
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]