ಶಿವಮೊಗ್ಗ ಲೈವ್.ಕಾಂ | 3 ಜನವರಿ 2019
ಸಾಗರ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಮಂಗಗಳ ಅಸಹಜ ಸಾವು ಮುಂದುವರೆದಿದ್ದು, ಮಂಗನ ಕಾಯಿಲೆ ಆತಂಕ ಇಮ್ಮಡಿಯಾಗಿದೆ. ಇನ್ನು, ಮಂಗನ ಕಾಯಿಲೆ ಶಂಕಿತರೊಬ್ಬರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಕಂಚಿಕೈ ಮಂಜುನಾಥ (22) ಮೃತಪಟ್ಟಿದ್ದಾರೆ. ಮಂಜುನಾಥ ಅವರಿಗೆ ತೀವ್ರ ಜ್ವರ ಮತ್ತು ಜಾಂಡೀಸ್ ಇತ್ತು. ಮಂಗನ ಕಾಯಿಲೆ ಶಂಕೆಯಿಂದಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಅವರ ರಕ್ತದ ಮಾದರಿಯನ್ನು ಪುಣೆಯಲ್ಲಿರುವ ಲ್ಯಾಬ್’ಗೆ ಕಳುಹಿಸಲಾಗಿದೆ.
ಮುಂದುವರೆದ ಮಂಗಗಳ ಸಾವು
ಭಾರಂಗಿ ಹೋಬಳಿಯ ಅರಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಂಗಗಳ ಅಸಹಜ ಸಾವು ಮುಂದುವರೆದಿದೆ. ಬುಧವಾರ ಎರಡು ಮಂಗಗಳ ಮೃತದೇಹ ಪತ್ತೆಯಾಗಿದೆ. ಶರಾವತಿ ಹಿನ್ನೀರು ಭಾಗದ ತುಂಬೆ ಗ್ರಾಮದಲ್ಲಿ ಒಂದು ಮಂಗದ ಶವ ಪತ್ತೆಯಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಮಂಗಗಳ ಶವವನ್ನು ವೈಜ್ಞಾನಿಕವಾಗಿ ಸುಟ್ಟುಹಾಕಿದೆ. ಈವರೆಗೂ 19ಕ್ಕೂ ಹೆಚ್ಚು ಮೃತ ಮಂಗಗಳನ್ನು ಸುಟ್ಟು ಮೆಲಾಥಿಯಾನ್ ಪುಡಿ ಸಿಂಪಡಿಸಲಾಗಿದೆ.
PHOTO | ಮುಪ್ಪಾನೆಯಲ್ಲಿ ಚಾರಣವನ್ನು ನಿಷೇಧಿಸಲಾಗಿದೆ. ಈ ಕರಿತು ಆದೇಶ ಹೊರಡಿಸಲಾಗಿದೆ.
ಮುಂದುವರೆದ ಲಸಿಕಾ ಕಾರ್ಯಕ್ರಮ
ಇನ್ನು, ಅರಳಗೋಡು ಭಾಗದಲ್ಲಿ ಜನರಿಗೆ ಲಸಿಕೆ ಹಾಕುವ ಕಾರ್ಯ ನಡೆಯುತ್ತಿದೆ. ಈವರೆಗೂ 1700ಕ್ಕೂ ಹೆಚ್ಚು ಜನರಿಗೆ ಪ್ರಥಮ ಹಂತದಲ್ಲಿ ಲಸಿಕೆ ಹಾಕಲಾಗಿದೆ. ಈಗ ಎರಡನೇ ಡೋಸ್ ಲಸಿಕೆ ಹಾಕಲು ನಿರ್ಧರಿಸಲಾಗಿದೆ. ಆದರೆ ಒಮ್ಮೆಯ ಲಸಿಕೆ ಹಾಕಿಸಿಕೊಳ್ಳಲದವರನ್ನು ಪತ್ತೆ ಹಚ್ಚಿ ಲಸಿಕೆ ಹಾಕುವ ಕಾರ್ಯ ನಡೆಯುತ್ತಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494
ಈ ಮೇಲ್ | [email protected]