ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 DECEMBER 2020
ಮತದಾರರಿಗೆ ಹಂಚಲು ಪಲಾವ್ ರೆಡಿ ಮಾಡುತ್ತಿದ್ದ ತೋಟದ ಮನೆ ಮೇಲೆ ಚುನಾವಣಾ ನೀತಿ ಸಂಹಿತೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗ ತಾಲೂಕಿನ ಗಾಜನೂರು ಸಮೀಪದ ಹೊಸಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಈ ಘಟನೆ ನಡೆದಿದೆ.
ಹೊಸಹಳ್ಳಿ ಗ್ರಾಮ ಪಂಚಾಯಿತಿಗೆ ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬರು ತಮ್ಮನ್ನು ಬೆಂಬಲಿಸಿದ ಮತದಾರರಿಗೆ ಪಲಾವ್ ಹಂಚಲು ರೆಡಿ ಮಾಡಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಚುನಾವಣಾಧಿಕಾರಿಗಳು ದಾಳಿ ನಡೆಸಿದರು.
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಪಲಾವ್ ಮಾಡಲು ಬಳಸಿದ್ದ ಪಾತ್ರೆಗಳು, ರೆಡಿಯಾಗಿದ್ದ ಪಲಾವ್, ಆಹಾರ ಸಾಮಗ್ರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ಪಲಾವ್ ರೆಡಿ ಮಾಡುತ್ತಿದ್ದವರು ಪರಾರಿಯಾಗಿದ್ದಾರೆ.
200ಕ್ಕೂ ಹೆಚ್ಚು ಜನರಿಗೆ ಪಲಾವ್, ಮೊಸರು ಬಜ್ಜಿ ರೆಡಿ ಮಾಡಿಸಲಾಗಿತ್ತು. ಊಟ ತಯಾರಿಸಿದ ಅಭ್ಯರ್ಥಿಯ ಯಾರು ಅನ್ನುವುದು ತಿಳಿದು ಬಂದಿಲ್ಲ. ಈ ಸಂಬಂದ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಚುನಾವಣಾಧಿಕಾರಿ ಚಂದ್ರಪ್ಪ ತಿಳಿಸಿದ್ದಾರೆ.
VIDEO REPORT
ದಾಳಿಯಲ್ಲಿ ಚುನಾವಣಾಧಿಕಾರಿ ಚಂದ್ರಪ್ಪ, ಇಒ ಡಾ.ಕಲ್ಲಪ್ಪ ಸೇರಿದಂತೆ ಇತರರು ಇದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





