ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಆಗಸ್ಟ್ 2020
BSNL ಸಂಸ್ಥೆ ಮತ್ತು ಅದರ ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಸಂಸದ ಅನಂತ ಕುಮಾರ್ ಹೆಗಡೆ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿ ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ನ ಶಿವಮೊಗ್ಗ ಘಟಕ ಒತ್ತಾಯಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಮಜ್ದೂರ್ ಕಾಂಗ್ರೆಸ್, BSNL ಸಂಸ್ಥೆ ನೌಕರರು ವಿರುದ್ಧ ಅವಹೇಳನಕಾರಿ ಹೇಳಕೆ ನೀಡಿದ್ದಾರೆ. ಅಲ್ಲದೆ BSNL ಸಂಸ್ಥೆ ಖಾಸಗೀಕರಣ ಮಾಡುವುದಾಗಿ ಹೇಳಿಕೆ ನೀಡಿದ್ದಾರೆ. ಕೂಡಲೆ ಅವರು ಕ್ಷಮೆಯಾಚಿಸಬೇಕು, BSNL ಖಾಸಗೀಕರಣದ ನಿರ್ಧಾರ ಕೈಬಿಡಬೇಕು ಎಂದು ಆಗ್ರಹಿಸಿದರು.
ಈ ಸಂಬಂಧ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಯುವ ಕಾಂಗ್ರೆಸ್ ಉಪಾಧ್ಯಕ್ಷ ಶರತ್.ಎಂ.ಎಸ್, ಮಜ್ದೂರ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ್ ಜಾಧವ್, ನಗರಾಧ್ಯಕ್ಷ ರಘವೇಂದ್ರ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
https://www.facebook.com/liveshivamogga/videos/649966572543720/?t=2
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]