ಶಿವಮೊಗ್ಗ ಲೈವ್.ಕಾಂ | 4 ಜನವರಿ 2019
ಹಿಂದೂ ದೇವರುಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಎಸ್.ಕೆ.ಭಗವಾನ್ ಅವರನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ, ವಿಶ್ವಹಿಂದೂ ಪರಿಷತ್, ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿತು. ಭಗವಾನ್ ಎಂದು ಹೆಸರಿಟ್ಟುಕೊಂಡು ಅದಕ್ಕೆ ವಿರುದ್ಧವಾಗಿ ಹಿಂದೂ ಧರ್ಮದ ದೇವರುಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡುತ್ತಿರುವುದನ್ನು ವಿರೋಧಿಸಿದರು. ಇದಕ್ಕೂ ಮೊದಲು, ರಂಗಪ್ಪ ವೃತ್ತದಿಂದ ತಾಲ್ಲೂಕು ಕಚೇರಿವರೆಗೆ ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಾಕಾರರು ತಹಶೀಲ್ದಾರ್ ಅವರಿಗೆ ಮನವಿಸಲ್ಲಿಸಿದರು.
ಪ್ರಮುಖರಾದ ಓಂಕಾರಪ್ಪ, ಧರ್ಮಪ್ರಸಾದ್, ಬಿ.ಕೆ.ಶ್ರೀನಾಥ್, ರಾಮಚಂದ್ರ, ಆರ್.ಎಸ್.ಶೋಭ, ಹೇಮಾವತಿ ವಿಶ್ವನಾಥರಾವ್ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494
ಈ ಮೇಲ್ | [email protected]