ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 14 ಜನವರಿ 2020
ಸ್ಮಾರ್ಟ್ ಸಿಟಿ ಯೋಜನೆಗಾಗಿ ಮಸೋಯಿಚ್ಛೆ ಮರಗಳನ್ನು ಕಡಿಯಲಾಗುತ್ತಿದೆ. ಇದಕ್ಕೆ ಅನುಮತಿ ನೀಡುತ್ತಿರುವ ವಲಯ ಅರಣ್ಯಾಧಿಕಾರಿಯನ್ನು ಕೂಡಲೇ ಸ್ಥಳಾಂತರ ಮಾಡಬೇಕು ಎಂದು ಒತ್ತಾಯಿಸಿ ರಾಷ್ಟ್ರೀಯ ಸ್ವಾಭಿಮಾನ ಆಂದೋಲನದ ವತಿಯಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸಾಗರ ರಸ್ತೆಯ ಪ್ರವಾಸಿ ಮಂದಿರದ ಮುಂದೆ ಮರ ಕಡಿಯಲು ಅನುಮತಿ ನೀಡಲಾಗಿತ್ತು. ಆದರೆ ರಾಷ್ಟ್ರೀಯ ಸ್ವಾಭಿಮಾನ ಆಂದೋಲನದ ಕಾರ್ಯಕರ್ತರು, ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ ರೆಂಬೆ ಕತ್ತರಿಸಿದ ಮರದ ಕೆಳಗೆ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಮರ ಕಡಿಯಲು ಅನುಮತಿ ನೀಡಿದ ಶಿವಮೊಗ್ಗ ನಗರದ ವಲಯ ಅರಣ್ಯಾಧಿಕಾರಿ ಜಯೇಶ್ ಅವರನ್ನು ವರ್ಗಾವಣೆ ಮಾಡುವವರೆಗು ಉಪವಾಸ ನಡೆಸಲಾಗುತ್ತದೆ ಎಂದು ಆಂದೋಲನದ ಪ್ರಮುಖರು ತಿಳಿಸಿದ್ದಾರೆ.
ಸ್ಮಾರ್ಟ್ ಸಿಟಿ ಯೋಜನೆಗಾಗಿ ಶಿವಮೊಗ್ಗ ನಗರದ ವಿವಿಧೆಡೆ ಮರಗಳನ್ನು ಕಡಿಯಲಾಗುತ್ತಿದೆ. ಅನಗತ್ಯವಾಗಿ ಮರಗಳನ್ನು ಕಡಿಯುತ್ತಿರುವುದಕ್ಕೆ ಪರಿಸರವಾದಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.
ಪತ್ರಕರ್ತ ಶಿವಮೊಗ್ಗ ನಂದನ್, ಬಾಲಕೃಷ್ಣ, ಶಿವಕುಮಾರ್ ಸೇರಿದಂತೆ ಹಲವರು ಉಪವಾಸದಲ್ಲಿ ಪಾಲ್ಗೊಂಡಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]