ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 8 MARCH 2021
ಭದ್ರಾವತಿಯಲ್ಲಿ ನಡೆದ ಗಲಾಟೆ, ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ದೂರು ದಾಖಲಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಪಕ್ಷ ಪ್ರತಿಭಟನೆ ಆಯೋಜಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜ್ಯ ಕಾಂಗ್ರೆಸ್ನ ಹಲವು ಪ್ರಮುಖರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್, ರಾಜ್ಯ ಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ,ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಎಲ್ಲಿ ನಡೆಯುತ್ತೆ ಪ್ರತಿಭಟನೆ?
ಕಬಡ್ಡಿ ಪಂದ್ಯಾವಳಿ ವೇಳೆ ನಡೆದ ಗಲಾಟೆ ಸಂಬಂಧ ಭದ್ರಾವತಿ ಶಾಸಕ ಸಂಗಮೇಶ್ವರ್, ಅವರ ಕುಟುಂಬ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಇದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷ ಪ್ರತಿಭಟನೆ ಆಯೋಜಿಸಿದೆ. ‘ಮಾರ್ಚ್ 13ರಂದು ಬೆಳಗ್ಗೆ 11 ಗಂಟೆಗೆ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಯಲಿದೆ’ ಎಂದು ಕಿಮ್ಮನೆ ರತ್ನಾಕರ್ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಏಕೆ ಪ್ರತಿಭಟನೆ?
ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸಲು ಮುಂದಾದರೆ, ಮುಂಜಾಗ್ರತಾ ಕ್ರಮವಾಗಿ ಭದ್ರಾವತಿಯಲ್ಲಿ ನಿಷೇಧಾಜ್ಞೆ ವಿಧಿಸಬಹುದು. ಇದರಿಂದ ಗೊಂದಲ ಉಂಟಾಗುವ ಸಾಧ್ಯತೆ ಇದೆ. ಅಲ್ಲದೆ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ನಡೆಸುವುದು ಸೂಕ್ತ ಎಂದು ತೀರ್ಮಾನಿಸಿ, ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422