ಶಿವಮೊಗ್ಗ ಲೈವ್.ಕಾಂ | SAGARA NEWS | 22 ಅಕ್ಟೋಬರ್ 2020
ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿ ಮತ್ತು ಪ್ರಧಾನ ಅರ್ಚಕರ ನಡುವಿನ ಸಂಘರ್ಷ ನ್ಯಾಯಾಲಯದ ಮಧ್ಯಸ್ಥಿಕೆಯಿಂದ ಸುಖಾಂತ್ಯ ಕಂಡಿದೆ. ಈ ನಡುವೆ ಮಧ್ಯಸ್ಥಿಕೆಗಾರರ ಮುಂದೆ ಎರಡು ಕಡೆಯವರು ಕೋವಿಡ್ ನಿಯಮ ಪಾಲಿಸಲು ಒಪ್ಪಿಗೆ ಸೂಚಿಸಿದ್ದಾರೆ.
ಏನೆಲ್ಲ ನಿಯಮಕ್ಕೆ ಒಪ್ಪಿಗೆ ಸೂಚಿಸಲಾಗಿದೆ?
ಕರೋನ ಹಿನ್ನೆಲೆ ದೇವಸ್ಥಾನದಲ್ಲಿ ಒಂದು ಸರಿಗೆ 40 ಭಕ್ತರು ಮಾತ್ರವೆ ಉಪಸ್ಥಿತರಿರಬೇಕು. ಅದಕ್ಕಿಂತ ಹೆಚ್ಚಿನ ಭಕ್ತರು ಒಂದು ಸರಿ ಇರುವಂತಿಲ್ಲ.
ದೇವಸ್ಥಾನದಲ್ಲಿ ಬರುವ ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳಲೇಬೇಕು.
ಪೂಜೆಯ ಬಳಿಕ ಅರ್ಚಕರು ಮಂಗಳಾರತಿ ತಟ್ಟೆಯನ್ನು ಒಂದು ನಿರ್ದಿಷ್ಟ ಜಾಗದಲ್ಲಿ ಇರಿಸಿ, ಭಕ್ತರು ಮಂಗಳಾರತಿ ತೆಗೆದುಕೊಳ್ಳಲು ಅವಕಾಶ ನೀಡಬೇಕು. ಅರ್ಚಕರು ಭಕ್ತರ ಬಳಿಗೆ ಮಂಗಳಾರತಿ ತಟ್ಟೆಯನ್ನು ಕೊಂಡೊಯ್ಯುವಂತಿಲ್ಲ.
ದಸರಾ ಹಬ್ಬದ ಅಂಗವಾಗಿ ದೇವಸ್ಥಾನದಲ್ಲಿ ಹೋಮ ನಡೆಸಬಹುದು. ಧರ್ಮದರ್ಶಿ ರಾಮಪ್ಪ ಮತ್ತು ಪ್ರಧಾನ ಅರ್ಚಕ ಶೇಷಗಿರಿ ಭಟ್ ಅವರು ತಮ್ಮ ಕುಟುಂಬದವರೊಂದಿಗೆ ಹೋಮ ನಡೆಸುವುದು.
ಕರೋನ ಪಿಡುಗು ದೂರವಾದ ಬಳಿಕ ಧರ್ಮದರ್ಶಿ ರಾಮಪ್ಪ, ಪ್ರಧಾನ ಅರ್ಚಕ ಶೇಷಗಿರಿ ಭಟ್ ಅವರು ಹೊಂದಾಣಿಕೆ ಮೂಲಕ ದೇವಸ್ಥಾನದ ಪೂಜೆ ಮತ್ತು ಇತರೆ ಚಟುವಟಿಕೆ ನಡೆಸಬಹುದು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]