ಶಿವಮೊಗ್ಗ ಜಿಲ್ಲೆ ಲಾಕ್ ಡೌನ್, ಕೆಲವು ಸೇವೆಗಳಿಗೆ ವಿನಾಯಿತಿ, ಇಲ್ಲಿದೆ ಲಾಕ್ ಡೌನ್ ಕುರಿತ ಪ್ರಮುಖ ಹತ್ತು ಪಾಯಿಂಟ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 MAY 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕರೋನ ನಿಯಂತ್ರಣದ ಕಡೆಯ ಅಸ್ತ್ರವಾಗಿ ಶಿವಮೊಗ್ಗ ಜಿಲ್ಲೆಯನ್ನು ಸಂಪೂರ್ಣ ಲಾಕ್‍ ಡೌನ್ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ.

ಮೇ 31 ರಿಂದ ಜೂನ್ 7ರವರೆಗೆ ಲಾಕ್ ಡೌನ್ ಘೋಷಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಲಾಕ್ ಡೌನ್ ಘೋಷಣೆ ಮಾಡಿದ್ದಾರೆ. ಈ ಅವಧಿಲ್ಲಿ ಪೊಲೀಸರಿಗೆ ಸಂಪೂರ್ಣ ಪವರ್ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಸಚಿವ ಈಶ್ವರಪ್ಪ ಅವರ ಹೇಳಿಕೆಯ ವಿಡಿಯೋ ವರದಿ ಇಲ್ಲಿದೆ.

ಮತ್ತೊಂದೆಡೆ ಶಿವಮೊಗ್ಗ ಜಿಲ್ಲಾಡಳಿತ ಅಗತ್ಯ ಮತ್ತು ತರ್ತು ಸೇವೆಗಳಿಗೆ ಅವಕಾಶ ಕಲ್ಪಿಸಿದೆ. ಲಾಕ್ ಡೌನ್ ಅವಧಿಯಲ್ಲಿ ಜನಜೀವನಕ್ಕೆ ತೊಂದರೆಯಾಗದಂತೆ ಈ ಕ್ರಮ ವಹಿಸಲಾಗಿದೆ.

ಯಾವೆಲ್ಲ ಸೇವೆಗಳಿಗೆ ಅವಕಾಶವಿದೆ?

1 ) ಔಷಧಿ ಅಂಗಡಿಗಳು, ನೆರೆಹೊರೆಯಲ್ಲಿರುವ ತರಕಾರಿ, ಹಾಲು, ದಿನಸಿ ಅಂಗಡಿಗಳಿಗೆ ಮಾತ್ರ ಅವಕಾಶ.

COVID NEWS UPDATE 1 1

2) ಸಗಟು ದಿನಸಿ ಮಳಿಗೆಗಳು, ಎಪಿಎಂಸಿಯಲ್ಲಿ ಮಾರಾಟಕ್ಕೆ ಅವಕಾಶ ಇರುವುದಿಲ್ಲ. ಆದರೆ ಚಿಲ್ಲರೆ ಅಂಗಡಿಗಳಿಗೆ ಅವರು ಸರಕುಗಳನ್ನು ನೇರವಾಗಿ ಪೂರೈಕೆ ಮಾಡಬಹುದಾಗಿದೆ.

3) ತಳ್ಳುಗಾಡಿಗಳಲ್ಲಿ ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಿಗದಿಪಡಿಸಲಾಗಿರುವ ಪ್ರದೇಶ ವ್ಯಾಪ್ತಿಯಲ್ಲಿ ತರಕಾರಿ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ.

ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ

184878737 1120867021726540 930985356822368649 n.jpg? nc cat=110&ccb=1 3& nc sid=730e14& nc ohc=32KDutqBAacAX YI1tz& nc ht=scontent.fblr20 1

4) ಅವಶ್ಯಕ ಸೇವೆಗಳಿಗೆ ಗುರುತಿಸಲಾಗಿರುವ ಸರ್ಕಾರಿ ಕಚೇರಿಗಳನ್ನು ಹೊರತುಪಡಿಸಿ ಬೇರೆ ಯಾವುದೇ ಕಚೇರಿಗಳು ಇರುವುದಿಲ್ಲ.

5) ಬ್ಯಾಂಕಿಂಗ್ ಸೇವೆಯಲ್ಲಿ ಕನಿಷ್ಟ ಮಟ್ಟದಲ್ಲಿ ಸೇವೆ ಒದಗಿಸಲು ಅವಕಾಶವಿದೆ.

6) ಹೊಟೇಲ್‍ನಲ್ಲಿ ಅಲ್ಲಿಯೇ ಊಟ, ತಿಂಡಿ, ಕಾಫಿಗೆ ಅವಕಾಶವಿಲ್ಲ. ಪಾರ್ಸೆಲ್ ಸೇವೆಗೆ ಮಾತ್ರ ಅವಕಾಶ.

7) ಮಾರ್ಗಸೂಚಿ ಪ್ರಕಾರ ಮದುವೆಗೆ ಅವಕಾಶವಿದೆ. ಆದರೆ ಮದುವೆಗೆ ಸಂಬಂಧಿಸಿದ ಸಮಾರಂಭಗಳು, ರಿಸಪ್ಷನ್, ಬಾಡೂಟಕ್ಕೆ ಅವಕಾಶವಿಲ್ಲ.

ಇದನ್ನೂ ಓದಿ | ಮೇ 31ರಿಂದ ಒಂದು ವಾರ ಶಿವಮೊಗ್ಗ ಜಿಲ್ಲೆ ಸಂಪೂರ್ಣ ಲಾಕ್ ಡೌನ್, ಏನಿರುತ್ತೆ? ಏನಿರಲ್ಲ?

8) ಗೃಹಪ್ರವೇಶ ಇತ್ಯಾದಿಗಳಿಗೆ ಅನುಮತಿ ಇರುವುದಿಲ್ಲ. ಇದನ್ನು ಉಲ್ಲಂಘಿಸಿ ಸಮಾರಂಭಗಳನ್ನು ಆಯೋಜಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು.

9) ಈಗಾಗಲೇ ಜಿಲ್ಲಾಡಳಿತದಿಂದ ಅನುಮತಿ ನೀಡಲಾಗಿರುವ ಅಗತ್ಯ ಕೈಗಾರಿಕಾ ಚಟುವಟಿಕೆಗಳಿಗೆ ಮಾತ್ರ ಅವಕಾಶವಿರುವುದು. ಗಾರ್ಮೆಂಟ್ಸ್‍ ಸೇರಿದಂತೆ ಉಳಿದ ಕಾರ್ಖಾನೆಗಳು ಬಂದ್.

10) ಅಗತ್ಯ ಸರ್ಕಾರಿ ಕಾಮಗಾರಿಗಳು ಹಾಗೂ ಮಾನ್ಸೂನ್ ಪೂರ್ವ ಕಾಮಗಾರಿಗಳನ್ನು ಬಿಟ್ಟು ಬೇರೆ ಎಲ್ಲಾ ನಿರ್ಮಾಣ ಕಾಮಗಾರಿಗಳಿಗೆ ಅನುಮತಿ ಇರುವುದಿಲ್ಲ.

April Reach Shivamogga Live

ಲಾಕ್‍ಡೌನ್ ಅವಧಿಯಲ್ಲಿ ಅನಗತ್ಯವಾಗಿ ರಸ್ತೆಗೆ ಬರುವ ವಾಹನಗಳನ್ನು ಜಪ್ತಿ ಮಾಡುವುದು ಮಾತ್ರವಲ್ಲದೆ, ಸವಾರರ ಮೇಲೆ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ.

ಕಳೆದ 7 ದಿನಗಳಿಂದ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿವೆ. ನಿರೀಕ್ಷಿತ ಪ್ರಮಾಣದಲ್ಲಿ ಕೋವಿಡ್ ಪ್ರಕರಣಗಳನ್ನು ತಗ್ಗಿಸುವ ಉದ್ದೇಶದಿಂದ ಒಂದು ವಾರ ಕಾಲ ಕಠಿಣ ಲಾಕ್‍ಡೌನ್ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment