ಶಿವಮೊಗ್ಗ ಲೈವ್.ಕಾಂ | SHIMOGA NEWS | 30 MAY 2021
ಕರೋನ ನಿಯಂತ್ರಣದ ಕಡೆಯ ಅಸ್ತ್ರವಾಗಿ ಶಿವಮೊಗ್ಗ ಜಿಲ್ಲೆಯನ್ನು ಸಂಪೂರ್ಣ ಲಾಕ್ ಡೌನ್ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಮೇ 31 ರಿಂದ ಜೂನ್ 7ರವರೆಗೆ ಲಾಕ್ ಡೌನ್ ಘೋಷಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಲಾಕ್ ಡೌನ್ ಘೋಷಣೆ ಮಾಡಿದ್ದಾರೆ. ಈ ಅವಧಿಲ್ಲಿ ಪೊಲೀಸರಿಗೆ ಸಂಪೂರ್ಣ ಪವರ್ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಸಚಿವ ಈಶ್ವರಪ್ಪ ಅವರ ಹೇಳಿಕೆಯ ವಿಡಿಯೋ ವರದಿ ಇಲ್ಲಿದೆ.
ಮತ್ತೊಂದೆಡೆ ಶಿವಮೊಗ್ಗ ಜಿಲ್ಲಾಡಳಿತ ಅಗತ್ಯ ಮತ್ತು ತರ್ತು ಸೇವೆಗಳಿಗೆ ಅವಕಾಶ ಕಲ್ಪಿಸಿದೆ. ಲಾಕ್ ಡೌನ್ ಅವಧಿಯಲ್ಲಿ ಜನಜೀವನಕ್ಕೆ ತೊಂದರೆಯಾಗದಂತೆ ಈ ಕ್ರಮ ವಹಿಸಲಾಗಿದೆ.
ಯಾವೆಲ್ಲ ಸೇವೆಗಳಿಗೆ ಅವಕಾಶವಿದೆ?
1 ) ಔಷಧಿ ಅಂಗಡಿಗಳು, ನೆರೆಹೊರೆಯಲ್ಲಿರುವ ತರಕಾರಿ, ಹಾಲು, ದಿನಸಿ ಅಂಗಡಿಗಳಿಗೆ ಮಾತ್ರ ಅವಕಾಶ.
2) ಸಗಟು ದಿನಸಿ ಮಳಿಗೆಗಳು, ಎಪಿಎಂಸಿಯಲ್ಲಿ ಮಾರಾಟಕ್ಕೆ ಅವಕಾಶ ಇರುವುದಿಲ್ಲ. ಆದರೆ ಚಿಲ್ಲರೆ ಅಂಗಡಿಗಳಿಗೆ ಅವರು ಸರಕುಗಳನ್ನು ನೇರವಾಗಿ ಪೂರೈಕೆ ಮಾಡಬಹುದಾಗಿದೆ.
3) ತಳ್ಳುಗಾಡಿಗಳಲ್ಲಿ ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಿಗದಿಪಡಿಸಲಾಗಿರುವ ಪ್ರದೇಶ ವ್ಯಾಪ್ತಿಯಲ್ಲಿ ತರಕಾರಿ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ.
ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ
4) ಅವಶ್ಯಕ ಸೇವೆಗಳಿಗೆ ಗುರುತಿಸಲಾಗಿರುವ ಸರ್ಕಾರಿ ಕಚೇರಿಗಳನ್ನು ಹೊರತುಪಡಿಸಿ ಬೇರೆ ಯಾವುದೇ ಕಚೇರಿಗಳು ಇರುವುದಿಲ್ಲ.
5) ಬ್ಯಾಂಕಿಂಗ್ ಸೇವೆಯಲ್ಲಿ ಕನಿಷ್ಟ ಮಟ್ಟದಲ್ಲಿ ಸೇವೆ ಒದಗಿಸಲು ಅವಕಾಶವಿದೆ.
6) ಹೊಟೇಲ್‍ನಲ್ಲಿ ಅಲ್ಲಿಯೇ ಊಟ, ತಿಂಡಿ, ಕಾಫಿಗೆ ಅವಕಾಶವಿಲ್ಲ. ಪಾರ್ಸೆಲ್ ಸೇವೆಗೆ ಮಾತ್ರ ಅವಕಾಶ.
7) ಮಾರ್ಗಸೂಚಿ ಪ್ರಕಾರ ಮದುವೆಗೆ ಅವಕಾಶವಿದೆ. ಆದರೆ ಮದುವೆಗೆ ಸಂಬಂಧಿಸಿದ ಸಮಾರಂಭಗಳು, ರಿಸಪ್ಷನ್, ಬಾಡೂಟಕ್ಕೆ ಅವಕಾಶವಿಲ್ಲ.
ಇದನ್ನೂ ಓದಿ | ಮೇ 31ರಿಂದ ಒಂದು ವಾರ ಶಿವಮೊಗ್ಗ ಜಿಲ್ಲೆ ಸಂಪೂರ್ಣ ಲಾಕ್ ಡೌನ್, ಏನಿರುತ್ತೆ? ಏನಿರಲ್ಲ?
8) ಗೃಹಪ್ರವೇಶ ಇತ್ಯಾದಿಗಳಿಗೆ ಅನುಮತಿ ಇರುವುದಿಲ್ಲ. ಇದನ್ನು ಉಲ್ಲಂಘಿಸಿ ಸಮಾರಂಭಗಳನ್ನು ಆಯೋಜಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು.
9) ಈಗಾಗಲೇ ಜಿಲ್ಲಾಡಳಿತದಿಂದ ಅನುಮತಿ ನೀಡಲಾಗಿರುವ ಅಗತ್ಯ ಕೈಗಾರಿಕಾ ಚಟುವಟಿಕೆಗಳಿಗೆ ಮಾತ್ರ ಅವಕಾಶವಿರುವುದು. ಗಾರ್ಮೆಂಟ್ಸ್ ಸೇರಿದಂತೆ ಉಳಿದ ಕಾರ್ಖಾನೆಗಳು ಬಂದ್.
10) ಅಗತ್ಯ ಸರ್ಕಾರಿ ಕಾಮಗಾರಿಗಳು ಹಾಗೂ ಮಾನ್ಸೂನ್ ಪೂರ್ವ ಕಾಮಗಾರಿಗಳನ್ನು ಬಿಟ್ಟು ಬೇರೆ ಎಲ್ಲಾ ನಿರ್ಮಾಣ ಕಾಮಗಾರಿಗಳಿಗೆ ಅನುಮತಿ ಇರುವುದಿಲ್ಲ.
ಲಾಕ್‍ಡೌನ್ ಅವಧಿಯಲ್ಲಿ ಅನಗತ್ಯವಾಗಿ ರಸ್ತೆಗೆ ಬರುವ ವಾಹನಗಳನ್ನು ಜಪ್ತಿ ಮಾಡುವುದು ಮಾತ್ರವಲ್ಲದೆ, ಸವಾರರ ಮೇಲೆ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ.
ಕಳೆದ 7 ದಿನಗಳಿಂದ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿವೆ. ನಿರೀಕ್ಷಿತ ಪ್ರಮಾಣದಲ್ಲಿ ಕೋವಿಡ್ ಪ್ರಕರಣಗಳನ್ನು ತಗ್ಗಿಸುವ ಉದ್ದೇಶದಿಂದ ಒಂದು ವಾರ ಕಾಲ ಕಠಿಣ ಲಾಕ್‍ಡೌನ್ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]