ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 5 NOVEMBER 2020
ಹಳೆ ಬಾಕ್ಸ್ ಚರಂಡಿ ತೆರವುಗೊಳಿಸದೆ, ರಸ್ತೆ ಜಾಗವನ್ನು ಒತ್ತುವರಿ ಮಾಡಿಕೊಂಡು ಹೊಸ ಬಾಕ್ಸ್ ಚರಂಡಿ ನಿರ್ಮಿಸುತ್ತಿರುವ ಶಿವಮೊಗ್ಗ ಮಹಾನಗರ ಪಾಲಿಕೆ ಕ್ರಮಕ್ಕೆ ಅಶೋಕನಗರ ನಿವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಡುವೆ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿ, ಅಧಿಕಾರಿಗಳ ವಿರುದ್ಧ ಗರಂ ಆದರು.
ಅಮೃತ್ ಯೋಜನೆ ಅಡಿಯಲ್ಲಿ ಅಶೋಕ ನಗರದಲ್ಲಿ ಬಾಕ್ಸ್ ಚರಂಡಿ ನಿರ್ಮಿಸಲಾಗುತ್ತಿದೆ. ಆದರೆ ನಿಯಮಗಳನ್ನು ಗಾಳಿಗೆ ತೂರಿ ಚರಂಡಿ ನಿರ್ಮಿಸಲಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.
ಕ್ವಾರ್ಟರ್ಸ್ ಬೇಲಿ ಉಳಿಸಲು ಯತ್ನ
ಹಳೆಯ ಬಾಕ್ಸ್ ಚರಂಡಿಗೆ ಹೊಂದಿಕೊಂಡಂತೆ ಹೊಸ ಬಾಕ್ಸ್ ಚರಂಡಿ ನಿರ್ಮಿಸಲಾಗುತ್ತಿದೆ. ಇದಕ್ಕಾಗಿ ಒಂದೂವರೆ ಅಡಿಯಷ್ಟು ರಸ್ತೆಯನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ. ಪೊಲೀಸ್ ಇಲಾಖೆ ಕ್ವಾರ್ಟರ್ಸ್ನ ಬೇಲಿಯನ್ನು ಉಳಿಸುವ ಸಲುವಾಗಿ ಹೀಗೆ ಮಾಡಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಮಾಜಿ ಎಂಎಲ್ಎ ಭೇಟಿ, ಗರಂ
ವಿಚಾರ ತಿಳಿಯುತ್ತಿದ್ದಂತೆ ಕಾಮಗಾರಿ ಸ್ಥಳಕ್ಕೆ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಅವರು ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು. ನ್ಯೂನತೆಗಳು ಇರುವುದನ್ನು ಗಮನಿಸಿ ಪಾಲಿಕೆ ಕಮಿಷನರ್ ಅವರಿಗೆ ದೂರವಾಣಿ ಮೂಲಕ ವಿಚಾರ ತಿಳಿಸದರು. ಅಲ್ಲದೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422