ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಸೆಪ್ಟಂಬರ್ 2020
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ನ್ಯಾಯಮೂರ್ತಿ ಸದಾಶಿವ ಅವರ ಆಯೋಗದ ವರದಿಯನ್ನು ಅಂಗೀಕರಿಸಿ ಜಾರಿಗೊಳಿಸಲು ಕೇಂದ್ರಕ್ಕೆ ಶಿಫಾರಸು ಮಾಡಬೇಕೆಂದು ಮುಖ್ಯಮಂತ್ರಿಗಳಿಗೆ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ರಾಜ್ಯ ಉಪಾಧ್ಯಕ್ಷ ಭಾನುಪ್ರಸಾದ್ ಒತ್ತಾಯಿಸಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ದೀರ್ಘಕಾಲಿಕ ರಾಜಕೀಯ ಹೋರಾಟವಾಗಿ ಮಾರ್ಪಟ್ಟಿದೆ. ಯಾವುದೇ ಅಡ್ಡದಾರಿಗಳು ಇಲ್ಲಿ ಇಲ್ಲ. ರಾಜ್ಯ ಸರ್ಕಾರ ಈ ವರದಿಯನ್ನು ಅಂಗೀಕರಿಸಿ ಜಾರಿಗೆ ತರಬೇಕು. ಇಲ್ಲದಿದ್ದರೆ ಮುಂಬರುವ ಉಪಚುನಾವಣೆಯಲ್ಲಿ ಬಿಜೆಪಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲು ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗಗಳು ಸಜ್ಜಾಗಿವೆ ಎಂದು ಎಚ್ಚರಿಸಿದರು.
ಕರ್ನಾಟಕದ ಅರಣ್ಯ ಸರ್ಕಾರಿ ಅಕ್ರಮ ಗೋಮಾಳ ಮತ್ತಿತರ ಜಮೀನುಗಳನ್ನು ದಲಿತರಿಗೆ ಹಂಚಿಕೆ ಮಾಡಬೇಕು. ತೋಟಿ, ತಳವಾರಿಕೆ, ಇನಾಂತ್ತಿ ಜಮೀನುಗಳನ್ನು ಮರು ಮಂಜೂರಾತಿ ಮಾಡಲು ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಬೇಕು. ಭೂಸುಧಾರಣಾ ಸುಗ್ರಿವಾಜ್ಞೆ ಹಿಂದಕ್ಕೆ ಪಡೆಯಬೇಕು. ಸರ್ಕಾರಿ ವಲಯಗಳನ್ನು ಖಾಸಗೀಕರಣಗೊಳಿಸುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಬಳಿಕ ಈ ಸಂಬಂಧ ಜಿಲ್ಲಾಧಿಕಾರಿ ಅವರಿಗೆ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ವತಿಯಿಂದ ಮನವಿ ಸಲ್ಲಿಸಲಾಯಿತು.
ಪತ್ರಿಕಾಗೋಷ್ಠಿಯಲ್ಲಿ ಶ್ರೀಧರ್, ಮನೋಜ್, ವೆಂಕಟೇಶ್, ಮಂಜುನಾಥ್, ಸುನಿಲ್ , ಭಾನುಪ್ರಕಾಶ್ ಸೇರಿದಂತೆ ಹಲವರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]