SHIVAMOGGA LIVE NEWS | 27 AUGUST 2023
SHIMOGA : ವ್ಯಕ್ತಿಯೊಬ್ಬನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ. ಕಳೆದ ರಾತ್ರಿ ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆ (Police Station) ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಟಿಪ್ಪು ನಗರ 7ನೇ ತಿರುವಿನಲ್ಲಿ ಘಟನೆ ಸಂಭವಿಸಿದೆ. ಸುಮಾರು 50 ವರ್ಷದ ವ್ಯಕ್ತಿಯೊಬ್ಬನ ತಲೆ ಮೇಲೆ ಕಲ್ಲು ಎತ್ತಿ ಹಾಕಲಾಗಿದೆ. ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
