SHIVAMOGGA LIVE NEWS | 15 AUGUST 2023
SHIMOGA : 77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಶಿವಮೊಗ್ಗದ ವಿವಿಧೆಡೆ ತ್ರಿವರ್ಣ ಧ್ವಜಾರೋಹಣ (Flag Hoisting) ನೆರವೇರಿಸಲಾಯಿತು. ನಗರದ ಡಿಎಆರ್ ಪೊಲೀಸ್ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಧ್ವಜಾರೋಹಣ ನೆರವೇರಿತು. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಧ್ವಜಾರೋಹಣ ಮಾಡಿದರು.
ಕಾಂಗ್ರೆಸ್ ಕಚೇರಿ : ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಧ್ವಜಾರೋಹಣ ನೆರವೇರಿಸಿದರು. ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ವಿಧಾನ ಪರಿಷತ್ ಮಾಜಿ ಸದಸ್ಯ ಆರ್.ಪ್ರಸನ್ನ ಕುಮಾರ್, ಪ್ರಮುಖರಾದ ಎನ್.ರಮೇಶ್, ರವಿಕಮಾರ್, ಚಂದ್ರ ಭೂಪಾಲ್, ವಿಶ್ವನಾಥ ಕಾಶಿ, ಚಿನ್ನಪ್ಪ, ವಿವಿದ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬಜೆಪಿ ಕಚೇರಿ : ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಧ್ವಜಾರೋಹಣ (Flag Hoisting) ನೆರವೇರಿಸಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ರಾಮಣ್ಣ, ಪ್ರಮುಖರಾದ ಎಸ್.ಎಸ್.ಜ್ಯೋತಿಪ್ರಕಾಶ್, ಗಿರೀಶ್ ಪಟೇಲ್, ಎಸ್.ಜ್ಞಾನೇಶ್ವರ್, ರತ್ನಾಕರ ಶೆಣೈ, ವಿನ್ಸೆಂಟ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಜೆಡಿಎಸ್ ಕಚೇರಿ : ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್ ಅವರು ಪಕ್ಷದ ಕಚೇರಿ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿದರು. ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಸರ್ಕಾರಿ ಕಚೇರಿಗಳು ಜಗಮಗ, ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ರಂಗೋಲಿ ಹಬ್ಬ
