ಶಿವಮೊಗ್ಗ ಲೈವ್.ಕಾಂ | SAGARA NEWS | 27 ಆಗಸ್ಟ್ 2020
ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರ ಫೇಸ್ಬುಕ್ ಖಾತೆಯನ್ನೇ ಹ್ಯಾಕ್ ಮಾಡಿ, ಅವರ ಫೇಸ್ಬುಕ್ ಖಾತೆಯಲ್ಲಿರುವ ಸ್ನೇಹಿತರಿಗೆ ಹಣ ನೀಡುವಂತೆ ಹ್ಯಾಕರ್ಗಳು ಮನವಿ ಮಾಡುತ್ತಿದ್ದಾರೆ. ಈ ಸಂಬಂಧ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸಾಗರ ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಸುನಿಲ್ ಕುಮಾರ್ ಅವರ ಫೇಸ್ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಬಳಿಕ ಅವರ ಫ್ರೆಂಡ್ ಲಿಸ್ಟ್ನಲ್ಲಿರುವವರಿಗೆ ಮೆಸೇಜ್ ಕಳುಹಿಸಿರುವ ಹ್ಯಾಕರ್ಗಳು, ತಾವು ಕಷ್ಟದಲ್ಲಿದ್ದು, 20 ಸಾವಿರ ಹಣ ನೀಡುವಂತೆ ಮೆಸೇಜು ಮಾಡಿದ್ದಾರೆ.
ವಿಚಾರ ತಿಳಿಯುತ್ತಿದ್ದಂತೆ ಇನ್ಸ್ಪೆಕ್ಟರ್ ಸುನಿಲ್ ಕುಮಾರ್ ಅವರು ತಮ್ಮ ಸೈಬರ್ ಠಾಣೆಗೆ ದೂರು ನೀಡಿದ್ದಾರೆ. ಅವರ ಫೇಸ್ಬುಕ್ ಖಾತೆಯನ್ನು ಬ್ಲಾಕ್ ಮಾಡಲಾಗಿದೆ. ಯಾರೂ ಹಣ ನೀಡದಂತೆ ಅವರು ಮನವಿ ಮಾಡಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]