ಶಿವಮೊಗ್ಗ ಲೈವ್.ಕಾಂ | SHIMOGA | 17 ಫೆಬ್ರವರಿ 2020

ಶ್ರೀಗಂಧ ಮರ ಕಡಿತಲೆಗೆ ಸಂಬಂಧಿಸಿ ಹೊಸನಗರ ತಾಲೂಕಿನ ಇಬ್ಬರಿಗೆ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷ ಸಾದಾ ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
2017ರ ಜೂ.19ರಂದು ಹೊಸನಗರ ತಾಲೂಕಿನ ಹಿರಿಯೋಗಿ ಗ್ರಾಮದ ಕೇಶವ ಮತ್ತು ಸೋನಲೆ ಗ್ರಾಮದ ವಿರೂಪಾಕ್ಷ ಎಂಬುವವರು ವಸುವೆ ಗ್ರಾಮದ ಸರ್ವೇ ನಂ. 66ರ ಸರ್ಕಾರಿ ಜಾಗದಲ್ಲಿದ್ದ ಶ್ರೀಗಂಧ ಮರವನ್ನು ಕಡಿತಲೆ ಮಾಡಿ ಸಾಗಣೆ ಮಾಡುತ್ತಿದ್ದಾಗ ಹೊಸನಗರ ಪೊಲೀಸರು ಇಬ್ಬರನ್ನು ಬಂಧಿಸಿದ್ದರು.
5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಂ.ಶೋಭಾ ಅವರು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕೇಶವ ಮತ್ತು ವಿರೂಪಾಕ್ಷ ಅವರಿಗೆ ಶಿಕ್ಷೆ ಹಾಗೂ ದಂಡದ ಪ್ರಮಾಣವನ್ನು ಪ್ರಕಟಿಸಿದ್ದಾರೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಅಣ್ಣಪ್ಪ ನಾಯ್ಕ ವಾದ ಮಂಡಿಸಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]