ಶಿವಮೊಗ್ಗ ಲೈವ್.ಕಾಂ | SHIMOGA | 1 ಫೆಬ್ರವರಿ 2020

ವರದಕ್ಷಿಣೆ ಕಿರುಕುಳ ನೀಡಿ ಪತ್ನಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಪತಿಗೆ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಿದೆ.
ಭದ್ರಾವತಿ ತಾಲೂಕು ಮಾಳೇನಹಳ್ಳಿಯ ಸತೀಶ್ (30) ಶಿಕ್ಷೆಗೆ ಒಳಗಾದವ. ಈತ 2015ರಲ್ಲಿ ಪತ್ನಿ ರುಕ್ಮಿಣಿಗೆ ವರದಕ್ಷಿಣೆ ಕಿರುಕುಳ ನೀಡಿ ಹತ್ಯೆ ಮಾಡಿದ್ದ. ಈ ಕುರಿತು ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಭದ್ರಾವತಿ ಉಪವಿಭಾಗದ ಡಿವೈಎಸ್ಪಿ ನಾಗರಾಜ್ ಅವರು ಆಪಾದಿತನನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶೆ ಹೇಮಾವತಿ ಅವರು ಸತೀಶ್ಗೆ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿದ್ದಾರೆ. ದಂಡ ಪಾವತಿಸದಿದ್ದರೆ 6 ತಿಂಗಳು ಹೆಚ್ಚುವರಿ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಸುರೇಶ್ ವಾದ ಮಂಡಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]