ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 3 JANUARY 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಬೆಂಗಳೂರಿನ ನಿಮಾನ್ಸ್ ಸಂಸ್ಥೆಯ ಜನ ಆರೋಗ್ಯ ಕೇಂದ್ರದ ಎಪಿಡಿಮಿಯಾಲಜಿ ವಿಭಾಗ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಯುವ ಸ್ಪಂದನ ಕಾರ್ಯಕ್ರಮದಡಿ ಕಾರ್ಯನಿರ್ವಹಿಸಲು ಯುವ ಪರಿವರ್ತಕರು ಹಾಗೂ ಯುವ ಸಮಾಲೋಚಕರನ್ನು ಅಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲೆಗೆ ಐವರು ಯುವ ಪರಿವರ್ತಕರು
ಪ್ರತಿ ಜಿಲ್ಲೆಗೆ 3 ಪುರುಷ ಹಾಗೂ 2 ಮಹಿಳೆಯರು ಸೇರಿ ಐವರು ಯುವ ಪರಿವರ್ತಕರನ್ನು ಅಯ್ಕೆ ಮಾಡಲಾಗುತ್ತದೆ. ಆಸಕ್ತರು ಪದವಿ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರಬೇಕು. ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಇರಬೇಕು. ಉತ್ತಮ ಸಂವಹನ ಕೌಶಲ್ಯ, ಸ್ಪಷ್ಟ ಕನ್ನಡ ಉಚ್ಛಾರಣೆ ಬರಬೇಕು. 21 ರಿಂದ 35 ವರ್ಷದೊಳಗಿನ ಅಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಪ್ರತಿ ತಿಂಗಳು 7 ಸಾವಿರ ರೂ. ಗೌರವಧನ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಜಿಲ್ಲೆಗೆ ಒಬ್ಬ ಯುವ ಸಮಾಲೋಚಕ
ಪ್ರತಿ ಜಿಲ್ಲೆಗೆ ಓರ್ವ ಯುವ ಸಮಾಲೋಚಕರನ್ನು ಆಯ್ಕೆ ಮಾಡಲಾಗುತ್ತದೆ. ಪದವಿ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರಬೇಕು. ಆಪ್ತ ಸಮಾಲೋಚನೆಯನ್ನು ಒದಗಿಸುವ ಕೌಶಲ್ಯ, ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಇರಬೇಕು. ಉತ್ತಮ ಸಂವಹನ ಕೌಶಲ್ಯ, ಸ್ಪಷ್ಟವಾದ ಕನ್ನಡ ಉಚ್ಛಾರಣೆ ಅಗತ್ಯ. 21 ರಿಂದ 35 ವರ್ಷದೊಳಗಿನ ಅಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಪ್ರತಿ ತಿಂಗಳು 9 ಸಾವಿರ ರೂ. ಗೌರವಧನ ನೀಡಲಾಗುತ್ತದೆ.
ಇದನ್ನೂ ಓದಿ – ಭದ್ರಾವತಿ ಆಕಾಶವಾಣಿಯಲ್ಲಿ ಜ.3ರಿಂದ ವಿಶೇಷ ಸರಣಿ ಕಾರ್ಯಕ್ರಮ, ಸಮಯ ಪ್ರಕಟ
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08182-223328 ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.