SHIVAMOGGA LIVE NEWS | JOBS | 24 ಮೇ 2022
ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಕ್ಕಾಗಿ ನೇರ ಸಂದರ್ಶನ ಆಯೋಜಿಸಿದೆ. ಮೇ 27 ರಂದು ಬೆಳಗ್ಗೆ 10 ಗಂಟೆಗೆ ನೇರ ಸಂದರ್ಶನ ನಡೆಯಲಿದೆ. ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿವೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಸೇರಿದಂತೆ ಯಾವುದೇ ಪದವಿಗಳಲ್ಲಿ ತೇರ್ಗಡೆ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳನ್ನು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಆಸಕ್ತರು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ಹಾಜರಾಗುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದು. ಮೊಬೈಲ್ ನಂಬರ್ 9108235132 ಮತ್ತು 9482023412 ಗಳನ್ನು ಸಂಪರ್ಕಿಸಬಹುದು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಒಂದೇ ದಿನ 150ಕ್ಕೂ ಹೆಚ್ಚು ಜನರನ್ನು ಕಾಪಾಡಿದ ‘ಆಪತ್ಭಾಂಧವರು’, ಯಾರದು?
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.