ಶಿವಮೊಗ್ಗದಲ್ಲಿ ಉದ್ಯೋಗವಕಾಶ, ಸೆ.10ರಂದು ನೇರ ಸಂದರ್ಶನ, ಯಾರೆಲ್ಲ ಪಾಲ್ಗೊಳ್ಳಬಹುದು?

ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ವತಿಯಿಂದ ಸೆಪ್ಟೆಂಬರ್ 10 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ.

ಡೆಲಿವರಿ ಪ್ರವೇಟ್‌ ಲಿಮಿಟೆಡ್‌ ಹಾಗೂ ಶ್ರೀರಾಮ್ ಲೈಫ್ ಇನ್ಶೂರೆನ್ಸ್ ಕಂಪನಿಗಳು ಈ ಸಂದರ್ಶನದಲ್ಲಿ ಭಾಗವಹಿಸಲಿವೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಅಥವಾ ಯಾವುದೇ ಪದವಿ ಹೊಂದಿರುವ 18 ರಿಂದ 35 ವರ್ಷ ವಯಸ್ಸಿನೊಳಗಿನ ಆಸಕ್ತ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Shivamogga-Job-Update

ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕವಿರುವುದಿಲ್ಲ. ಆಸಕ್ತರು ತಮ್ಮ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್‌ ಪ್ರತಿಯೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಸಾಗರ ರಸ್ತೆಯ ಗುತ್ಯಪ್ಪ ಕಾಲೋನಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ 9380663606 ಅಥವಾ 9108235132 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ