ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನವೆಂಬರ್ 5 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನ ಆಯೋಜಿಸಲಾಗಿದೆ. (ಈ ಸುದ್ದಿಯನ್ನು ಇನ್ನು 44 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ನಗರದ ಸಾಗರ ರಸ್ತೆಯ ಪಂಪಾ ನಗರ 2ನೇ ಕ್ರಾಸ್ನಲ್ಲಿರುವ ಗುತ್ಯಪ್ಪ ಕಾಲೋನಿಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಈ ಸಂದರ್ಶನ ನಡೆಯಲಿದೆ. ಪ್ರತಿಷ್ಠಿತ ಖಾಸಗಿ ಕಂಪನಿಗಳಾದ ನೆಕ್ಸ್ ಚರ್ ಹಾಗೂ ಮುತ್ತೂಟ್ ಮನಿ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗಳು ಭಾಗವಹಿಸಲಿವೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅರ್ಹತೆ ಏನು? ಏನೆಲ್ಲ ದಾಖಲೆ ಬೇಕು?
ಪಿ.ಯು.ಸಿ. ಹಾಗೂ ಯಾವುದೇ ಪದವಿ ಪಡೆದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಹಾಗೂ ಆಧಾರ್ ಕಾರ್ಡ್ ಪ್ರತಿಯನ್ನು ಕಡ್ಡಾಯವಾಗಿ ತರಬೇಕಾಗಿ ವಿನಂತಿಸಲಾಗಿದೆ. ಉದ್ಯೋಗ ಮೇಳಕ್ಕೆ ಉಚಿತ ಪ್ರವೇಶವಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ನೇರವಾಗಿ ಸಂಪರ್ಕಿಸಬಹುದು ಅಥವಾ ದೂರವಾಣಿ ಸಂಖ್ಯೆ: 9380663606 ಗೆ ಕರೆ ಮಾಡಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.