ಶಿವಮೊಗ್ಗ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ನಿರುದ್ಯೋಗಿ ಮಹಿಳೆಯರಿಗೆ ಉಚಿತ ಬ್ಯೂಟಿ ಪಾರ್ಲರ್ ತರಬೇತಿ ಶಿಬಿರ ಆಯೋಜಿಸಲಾಗಿದೆ. ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. (ಶಿವಮೊಗ್ಗ ಲೈವ್.ಕಾಂ | ಮುಂದಿನ 5 ಪ್ಯಾರಾಗಳು ಕೆಳಗಿವೆ)
ಬೆಂಗಳೂರು ಗ್ರಾಮಾಂತರದ ಹೊಸಕೋಟೆ ತಾಲ್ಲೂಕಿನ ಹಸಿಗಾಳ ಅಂಚೆಯ ಸೊಣ್ಣಹಳ್ಳಿಪುರ ಗ್ರಾಮದಲ್ಲಿರುವ ತರಬೇತಿ ಕೇಂದ್ರದಲ್ಲಿ ತರಬೇತಿ ನಡೆಯಲಿದೆ. ಅಕ್ಟೋಬರ್ 22ರಿಂದ 35 ದಿನಗಳು ತರಬೇತಿ ಶಿಬಿರ ನಡೆಯಲಿದೆ. 18 ರಿಂದ 49 ವರ್ಷ ವಯೋಮಿತಿಯ ಮಹಿಳೆಯರು ಭಾಗವಹಿಸಲು ಅರ್ಹರಾಗಿದ್ದಾರೆ.

ಗ್ರಾಮೀಣ ಭಾಗದ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಗೆ ಕೇವಲ 35 ಅಭ್ಯರ್ಥಿಗಳಿಗೆ ಮಾತ್ರ ಅವಕಾಶವಿದೆ. ಮೊದಲು ಬಂದವರಿಗೆ ಮೊದಲ ಆದ್ಯತೆ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಆಸಕ್ತ ಅಭ್ಯರ್ಥಿಗಳು ಪಡಿತರ ಚೀಟಿ, ಆಧಾರ್ ಕಾರ್ಡ್ ಹಾಗೂ 4 ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ತರಬೇತಿಗೆ ಹಾಜರಾಗಬೇಕು. ಶಿಬಿರಾರ್ಥಿಗಳಿಗೆ ಉಚಿತವಾಗಿ ತರಬೇತಿ, ವಸತಿ ಹಾಗೂ ಊಟದ ವ್ಯವಸ್ಥೆ ಕಲ್ಪಿಸಲಾಗುವುದು. ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಬೋಧನೆ ಮಾಡಿಸಲಾಗುತ್ತದೆ. ತರಬೇತಿ ಪೂರ್ಣಗೊಂಡ ನಂತರ ಸಂಸ್ಥೆಯಿಂದ ಪ್ರಮಾಣ ಪತ್ರ ವಿತರಿಸಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ: 9886935603, 9591514154, 8970476050, 9686248369 ಹಾಗೂ 6363139123 ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.