ಸಿಸಿಟಿವಿ ಅಳವಡಿಕೆ, ಸರ್ವಿಸಿಂಗ್, ನಿರುದ್ಯೋಗಿ ಯುವಕರಿಗೆ ಉಚಿತ ತರಬೇತಿ, ಎಲ್ಲಿ? ಯಾವಾಗ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯು ನಿರುದ್ಯೋಗಿ ಪುರುಷರಿಗಾಗಿ ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವಿಸಿಂಗ್ ತರಬೇತಿ ಶಿಬಿರ ಆಯೋಜಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದಲ್ಲಿರುವ ಸಂಸ್ಥೆಯ ಆವರಣದಲ್ಲಿ ಆಗಸ್ಟ್‌ 27 ರಿಂದ 13 ದಿನಗಳ ಕಾಲ ಈ ತರಬೇತಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

18 ರಿಂದ 49 ವರ್ಷ ವಯಸ್ಸಿನ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರಕ್ಕೆ ಅರ್ಜಿ ಸಲ್ಲಿಸಬಹುದು. ತರಬೇತಿ, ಊಟ ಮತ್ತು ವಸತಿ ಸೌಕರ್ಯ ಉಚಿತವಾಗಿ ನೀಡಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಕುಟುಂಬದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳು ಕನ್ನಡ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ತರಬೇತಿ ಪೂರ್ಣಗೊಂಡ ಬಳಿಕ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

SHIMOGA-NEWS-GRAPHICS-BY-SHIVAMOGGA-LIVE

ಆಸಕ್ತರು ಆಗಸ್ಟ್‌ 20ರ ಬೆಳಿಗ್ಗೆ 9.30ಕ್ಕೆ ಸೊಣ್ಣಹಳ್ಳಿಪುರದಲ್ಲಿರುವ ತರಬೇತಿ ಸಂಸ್ಥೆಗೆ ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕು. ಒಂದು ವೇಳೆ ನೇರವಾಗಿ ಬರಲು ಸಾಧ್ಯವಾಗದಿದ್ದರೆ, ಆಗಸ್ಟ್‌ 20 ರೊಳಗೆ ಮೊಬೈಲ್‌ ನಂಬರ್:‌ 8970476050, 9591514154, 6363139123, 9686248369 ಅಥವಾ 9886935603 ಸಂಖ್ಯೆಗಳಿಗೆ ಕರೆ ಮಾಡಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.