ಶಿವಮೊಗ್ಗ ಲೈವ್
ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನವೆಂಬರ್ 26 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ. ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಖಾಲಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿವೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಈ ಸುದ್ದಿಯನ್ನು ಇನ್ನು 37 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಯಾರೆಲ್ಲ ಭಾಗವಹಿಸಬಹುದು?
- ಎಸ್.ಎಸ್.ಎಲ್.ಸಿ, ಪಿಯುಸಿ, ಡಿಪ್ಲೊಮಾ ಹಾಗೂ ಯಾವುದೇ ಪದವಿ ಪಡೆದ ಅಭ್ಯರ್ಥಿಗಳು.
- 18 ರಿಂದ 35 ವರ್ಷದ ಒಳಗಿನ ಅಭ್ಯರ್ಥಿಗಳಿಗೆ ಮಾತ್ರ ಅವಕಾಶ.
- ಉದ್ಯೋಗ ಮೇಳಕ್ಕೆ ಉಚಿತ ಪ್ರವೇಶವಿರಲಿದೆ. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಬರಬೇಕು.
ಶಿವಮೊಗ್ಗದ ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್ನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಕಚೇರಿಯನ್ನು ನೇರವಾಗಿ ಅಥವಾ ದೂರವಾಣಿ ಸಂಖ್ಯೆ 9380663606 ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
