ಕೆಲಸ ಖಾಲಿ ಇದೆ, ಆಗಸ್ಟ್‌ 7ರಂದು ನೇರ ಸಂದರ್ಶನ, ಯಾರೆಲ್ಲ ಪಾಲ್ಗೊಳ್ಳಬಹುದು? ಇಲ್ಲಿದೆ ಡಿಟೇಲ್ಸ್

ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಆಗಸ್ಟ್ 7 ರಂದು ಬೆಳಿಗ್ಗೆ 10 ಗಂಟೆಗೆ ಇಂಡಸ್‌ಲ್ಯಾಂಡ್ ಬ್ಯಾಂಕ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಈ ಸಂದರ್ಶನದಲ್ಲಿ ಭಾಗವಹಿಸಲು ಎಸ್.ಎಸ್.ಎಲ್.ಸಿ., ಪಿಯುಸಿ ಅಥವಾ ಯಾವುದೇ ಪದವಿ ಪಾಸಾದ ಹಾಗೂ 18 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. ಆಸಕ್ತರು ತಮ್ಮ ಬಯೋ-ಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಸಂದರ್ಶನದಲ್ಲಿ ಪಾಲ್ಗೊಳ್ಳಲು ಉಚಿತ ಪ್ರವೇಶವಿರುತ್ತದೆ.

Shivamogga-Job-Update

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಸಂದರ್ಶನ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ನೇರವಾಗಿ ಅಥವಾ 9380663606, 9108235132 ದೂರವಾಣಿ ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.