SHIVAMOGGA LIVE NEWS | 24 JANUARY 2023
SHIMOGA | ಕುವೆಂಪು ವಿಶ್ವವಿದ್ಯಾಲಯ, ಬೆಂಗಳೂರಿನ ಗೆಟ್ ಲೆಕ್ಟ್ ಯುನಿಕ್ಲಬ್ ವತಿಯಿಂದ ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ಉದ್ಯೋಗ ಮೇಳ (JOB FAIR) ಆಯೋಜಿಸಲಾಗಿದೆ. ರಾಜ್ಯ ಮತ್ತು ದೇಶದ 40ಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊಳ್ಳಲಿವೆ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರೊ. ಬಿ.ಪಿ.ವೀರಭದ್ರಪ್ಪ ಅವರು, ಫೆ.4ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಉದ್ಯೋಗ ಮೇಳ (JOB FAIR) ನಡೆಯಲಿದೆ. 10 ಸಾವಿರಕ್ಕೂ ಅಧಿಕ ಆಕಾಂಕ್ಷಿಗಳು ಭಾಗವಹಿಸುವ ನಿರೀಕ್ಷೆ ಇದೆ. ಪ್ರತಿಷ್ಠಿತ ಕಂಪನಿಗಳು ಇದರಲ್ಲಿ ಪಾಲ್ಗೊಳ್ಳಲಿವೆ ಎಂದು ತಿಳಿಸಿದರು.
ಸುಮಾರು 4500 ಹುದ್ದೆಗಳು
ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರು ಮಾತನಾಡಿ, ಬೆಂಗಳೂರಿನ ಗೆಟ್ ಲೆಕ್ಟ್ ಸಂಸ್ಥೆಯವರು ಹಲವು ಉದ್ಯೋಗ ಮೇಳಗಳನ್ನು ನಿರ್ವಹಿಸಿದ್ದಾರೆ. ಸಹ್ಯಾದ್ರಿ ಕಾಲೇಜಿನಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ 4500 ವಿವಿಧ ಹುದ್ದೆಗಳಿಗೆ ಸಂದರ್ಶನ ನಡೆಯಲಿದೆ ಎಂದು ತಿಳಿಸಿದರು.
ಯಾರೆಲ್ಲ ಭಾಗವಹಿಸಬಹುದು?
ರಾಜ್ಯದ ವಿವಿಧೆಡೆಯ ಉದ್ಯೋಗಾಕಾಂಕ್ಷಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಎಸ್ಸೆಸ್ಸೆಲ್ಸಿ, ಪಿಯುಸಿ, ಬಿಎ, ಬಿಕಾಂ, ಬಿಎಸ್ಸಿ, ಬಿಬಿಎ, ಎಂಬಿಎ, ಬಿಸಿಎ, ಎಂಸಿಎ, ಡಿಪ್ಲೋಮಾ, ಐಟಿಐ, ಕಂಪ್ಯೂಟರ್ ಕೋರ್ಸ್ ಮಾಡಿರುವ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಅವಕಾಶವಿದೆ. ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯ ಉದ್ಯೋಗಾಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ಅವರು ತಿಳಿಸಿದರು.
ಯಾವೆಲ್ಲ ಕಂಪನಿ ಪಾಲ್ಗೊಳ್ಳಲಿವೆ?
ಇನ್ಫೋಸಿಸ್, ಆಕ್ಸೆಂಚರ್, HSBC, ಕಾನ್ಸೆಟಿಕ್ಸ್, ಆಲ್ ಟ್ರೂಯಿಸ್ಟ್ ಟೆಕ್ನೊಲಾಜೀಸ್, HCL ಟೆಕ್, HDFC ಬ್ಯಾಂಕ್, ಮುತ್ತೂಟ್ ಫೈನಾನ್ಸ್, ನೋ ಬ್ರೋಕರ್, ಜನ ಸ್ಮಾಲ್ ಫೈನಾನ್ಸ್ ಬ್ಯಾಂಕ್, ಮೆಡ್ ಪ್ಲಸ್, ಫ್ಲಿಪ್ ಕಾರ್ಟ್, ಅಪೋಲೋ ಫಾರ್ಮಾ, ಹೆಚ್.ಜಿ.ಎಸ್, ಆಂಪಲ್ ಟೆಕ್ನೊಲಾಜಿಸ್, ಟೌರಸ್ ಸರ್ವಿಸ್, ಎಸ್.ಬಿ.ಐ ಬ್ಯಾಂಕ್, ಜೆಟ್ ಕಿಂಗ್, ಸ್ಪಂದನಾ ಸ್ಫೂರ್ತಿ ಫೈನಾನ್ಸ್ ಲಿಮಿಟೆಡ್, ಎಕ್ಸ್ ಪರ್ಟ್ ಕಾಲರ್ಸ್, ಬೈಜೂಸ್, ಯಸ್ ಬ್ಯಾಂಕ್, ಲೆನ್ಸ್ ಕಾರ್ಟ್, ನಂದಿ ಟೊಯೋಟಾ, ಕೀ ಟು ಏರ್, ಕೋಟಕ್ ಮಹೇಂದ್ರ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಎಲ್ ಅಂಡ್ ಟಿ ಫೈನಾನ್ಸ್ ಸೇರಿದಂತೆ ಹಲವು ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ.
ರಿಜಿಸ್ಟರ್ ಮಾಡಿಕೊಳ್ಳುವುದು ಹೇಗೆ?
ಉದ್ಯೋಗ ಮೇಳದಲ್ಲಿ ಭಾಗವಹಿಸಲು ಆಸಕ್ತಿ ಹೊಂದಿರುವವರು ಇಲ್ಲಿ ನೀಡಿರುವ ಲಿಂಕ್ ಕ್ಲಿಕ್ ಮಾಡಿ, ಫಾರಂ ಫಿಲ್ ಮಾಡಬಹುದಾಗಿದೆ.
ಉದ್ಯೋಗ ಮೇಳ ಸಂಬಂಧ ಹೆಚ್ಚಿನ ಮಾಹಿತಿಗೆ ಪ್ಲೇಸ್ ಮೆಂಟ್ ಆಫೀಸರ್ ಮಂಜುನಾಥ್ ಮೊ. 9480012101, ಸಹ್ಯಾದ್ರಿ ಕಾಲೇಜು ಪ್ರಾಂಶುಪಾಲರಾದ ಡಾ. ವೀಣಾ ಮೊ.9731160379, ಪ್ರಾಂಶುಪಾಲರಾದ ಡಾ. ರಾಜೇಶ್ವರಿ ಮೊ.9480329762 ಅವರನ್ನು ಸಂಪರ್ಕಿಸಬಹುದಾಗಿದೆ.
ಇದನ್ನೂ ಓದಿ – ಶಿವಮೊಗ್ಗದ ಹಲವು ಕಡೆ ಕೆಲಸ ಖಾಲಿ ಇದೆ, ಇಲ್ಲಿದೆ ಎಲ್ಲದರ ಡಿಟೇಲ್ಸ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200